ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಯೋಧ ಸಾವು

Social Share

ಕಡಬ,ಆ.15- ಧ್ವಜಾರೋಹಣ ಸಂದರ್ಭದಲ್ಲಿ ನಿವೃತ್ತ ಯೋಧ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಟ್ರುಪಾಡಿ ಗ್ರಾಮದ ಹಳೇ ಸ್ಟೇಷನ್ ಅಮೃತಸರೋವರದ ಬಳಿ ಇಂದು ಬೆಳಗ್ಗೆ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಏಕಾಏಕಿ ನಿವೃತ್ತಯೋಧ ಗಂಗಾಧರ ಗೌಡ ಎಂಬುವರು ಕುಸಿದು ಬಿದ್ದರು.

ಸ್ಥಳದಲ್ಲಿದ್ದವರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ನಿವೃತ್ತ ಯೋಧ ಗಂಗಾಧರ ಗೌಡ ಅವರ ನಿಧನದಿಂದ ಕುಟ್ರುಪಾಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

Articles You Might Like

Share This Article