Sunday, May 19, 2024
Homeಇದೀಗ ಬಂದ ಸುದ್ದಿರೇವಣ್ಣ ಪ್ರಕರಣ : ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಎಸ್‌ಐಟಿ ತಂಡದಿಂದ ಮಾಹಿತಿ ಪಡೆದುಕೊಂಡ ಸಿಎಂ

ರೇವಣ್ಣ ಪ್ರಕರಣ : ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಎಸ್‌ಐಟಿ ತಂಡದಿಂದ ಮಾಹಿತಿ ಪಡೆದುಕೊಂಡ ಸಿಎಂ

ಬೆಂಗಳೂರು,ಮೇ 6- ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಎಸ್‌ಐಟಿ ತಂಡದ ಪ್ರಮುಖರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ರೇವಣ್ಣ ಅವರನ್ನು ಪೊಲೀಸರು ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿದರು. ಪ್ರಸ್ತುತ ರೇವಣ್ಣ ಎಸ್‌ಐಟಿ ಅಧಿಕಾರಿಗಳ ವಶದಲ್ಲಿದ್ದಾರೆ. ಹಾಸನದಲ್ಲಿ ನಡೆದಿದೆ ಎಂದು ಹೇಳಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್‌ ರೇವಣ್ಣ ಈವರೆಗೂ ಪತ್ತೆಯಾಗಿಲ್ಲ. ಅವರು ವಿದೇಶದಲ್ಲಿರಬಹುದು ಎಂಬ ವದಂತಿಗಳಿವೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಪ್ರಜ್ವಲ್‌ನನ್ನು ವಶಕ್ಕೆ ಪಡೆದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ಶನಿವಾರ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್‌ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದರು. ಅದರ ಬಳಿಕ ರೇವಣ್ಣ ಅವರ ಬಂಧನವಾಗಿತ್ತು. ವಿದೇಶದಲ್ಲಿದ್ದಾರೆ ಎಂದು ಹೇಳಲಾದ ಪ್ರಜ್ವಲ್‌ ರೇವಣ್ಣ ಅವರ ಮಾಹಿತಿ ಪಡೆದುಕೊಳ್ಳುವ ಸಲುವಾಗಿ ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಲಾಗಿದೆ.

ಮೂಲಗಳ ಪ್ರಕಾರ, ಬ್ಲೂ ಕಾರ್ನರ್‌ ನೋಟಿಸ್‌ ಸಕ್ರಿಯವಾದ ಬಳಿಕ ಪ್ರಜ್ವಲ್‌ ರೇವಣ್ಣ ಅವರ ನಿಖರ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಸೇರಿದಂತೆ ಹಿರಿಯ ಅಧಿ ಕಾರಿಗಳ ಸಭೆ ನಡೆಸಿ ಪ್ರಕರಣದ ತನಿಖೆಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ.

ನಿಷ್ಪಕ್ಷಪಾತ ಹಾಗೂ ಕಾನೂನಾತ್ಮಕವಾಗಿ ತನಿಖೆ ನಡೆಯಬೇಕು. ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಅವಕಾಶವಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಪ್ರಭಾವ ಹಾಗೂ ಒತ್ತಡಕ್ಕೆ ಮಣಿಯದೆ ಸಾಕ್ಷ್ಯ ಹಾಗೂ ಪುರಾವೆ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಯವರ ಸಭೆಯ ಬಳಿಕ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧದ ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ.

RELATED ARTICLES

Latest News