ಕಂದಾಯ ಇಲಾಖೆ ಕಚೇರಿಗಳಲ್ಲಿ ಅಕ್ರಮ, ಲೋಕಾಯುಕ್ತ ತನಿಖೆ ಆರಂಭ

Social Share

ಬೆಂಗಳೂರು,ಅ.22- ಬೆಂಗಳೂರು ಕಂದಾಯ ಇಲಾಖೆ ಕಚೇರಿಗಳಲ್ಲಿ ಅಕ್ರಮ ಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿರುವ ಲೋಕಾಯುಕ್ತ ನ್ಯಾಯ ಮೂರ್ತಿ ಬಿ.ಎಸ್. ಪಾಟೀಲ ಅವರು ವಿಚಾರಣೆ ಆರಂಭಿಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ಜಿಲ್ಲಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ಬೆಂಗಳೂರು ದಕ್ಷಿಣ ಮತ್ತು ಉತ್ತರ ಉಪ ವಿಭಾಗಾಧಿಕಾರಿಗಳ ಕಚೇರಿಗಳು, ಉತ್ತರ, ದಕ್ಷಿಣ, ಪೂರ್ವ, ಯಲಹಂಕ ಮತ್ತು ಆನೇಕಲ್ ತಾಲ್ಲೂಕು ಕಚೇರಿಗಳಲ್ಲಿ ಸೆಪ್ಟೆಂಬರ್ 27ರಂದು ದಿಢೀರ್ ತಪಾಸಣೆ ಮಾಡಿದ್ದವು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ

ಕಂದಾಯ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಸಾರ್ವಜನಿಕರಿಂದ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಅಧಿಕಾರಿಗಳ ಜಂಟಿ ತಂಡಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.

ಈ ವೇಳೆ ಅಧಿಕಾರಿಗಳ ಕಚೇರಿ ಮತ್ತು ಮುಭಾಗದಲ್ಲಿ ಲೆದರ್ ಕುರ್ಚಿಗಳು, ಸೋಫಾಗಳು, ಎಸಿಗಳು, ಟಿವಿ, ಫ್ರಿಡ್ಜ್, ಓವನ್, ಡೈನಿಂಗ್ ಟೇಬಲ್ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದ್ದವು. ಈ ಸಂಬಂಧ ವರದಿ ಹಾಗೂ ದಾಖಲೆಗಳನ್ನು ಸಲ್ಲಿಸುವಂತೆಸೂಚನೆ ನೀಡಿದ್ದರು. ಆದರೆ, ದಾಖಲೆ ಒದಗಿಸುವಲ್ಲಿ ವಿಫಲರಾಗಿದ್ದರು.

ಖರ್ಗೆ ಆಯ್ಕೆ ಬೆನ್ನಲ್ಲೇ ತಂತ್ರ ಬದಲಿಸಿದ ಬಿಜೆಪಿ

ಮಾಹಿತಿಗಳ ಪ್ರಕಾರ ಅಪಾರ್ಟ್‍ಮೆಂಟ್ ಬಿಲ್ಡರ್ ಹಾಗೂ ಕೆಲ ವ್ಯಾಪಾರಿಗಳು ಈ ವಸ್ತುಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆಂದು ಹೇಳಲಾಗುತ್ತಿದೆ.

Articles You Might Like

Share This Article