ಬೆಂಗಳೂರು,ಸೆ.13- ಬೆಂಗಳೂರಿನಲ್ಲಿ ಯಾವುದೇ ಮುಲಾಜಿಲ್ಲದೆ ಒತ್ತುವರಿ ತೆರವು ಮಾಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂದಾಯ ಇಲಾಖೆ ಬಿಬಿಎಂಪಿ, ಬಿಡಿಎ, ಜಂಟಿ ಕಾರ್ಯಾಚರಣೆ ಮೂಲಕ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ದೊಡ್ಡವರು, ಚಿಕ್ಕವರು ಎಂದು ನೋಡುವುದಿಲ್ಲ ಎಂದರು.
ಇದನ್ನೂ ಓದಿ : ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ
ಮುಖ್ಯಮಂತ್ರಿ ಹಾಗೂ ಅಡ್ವೋಕೇಟ್ ಜನರಲ್ ಅವರಲ್ಲಿ ಚರ್ಚಿಸಿ ನ್ಯಾಯಾಲಯದಲ್ಲಿ ಕೆವಿಯಟ್ ಹಾಕುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ಕಂದಾಯ ಇಲಾಖೆ ಒತ್ತುವರಿದಾರರ ಪಟ್ಟಿ ಸಿದ್ದಪಡಿಸಿ ಬಿಬಿಎಂಪಿಗೆ ನೀಡಲಾಗಿದೆ. ಎಷ್ಟೇ ದೊಡ್ಡವರಿದ್ದರು ಒತ್ತುವರಿ ತೆರವು ಮಾಡುತ್ತೇವೆ ಎಂದರು.
30 ಐಟಿ ಕಂಪನಿಗಳು ಒತ್ತುವರಿ ಮಾಡಿವೆ. ಆದರೂ ಅವರು ಬಹಳ ಸಾಚಾ ಎಂಬಂತೆ ಮಾತನಾಡುತ್ತಿದ್ದಾರೆ. ಭಾಗಮನೆ ಪಾರ್ಕ್‍ಗೂ ಯಾವುದೇ ವಿನಾಯ್ತಿ ನೀಡಿಲ್ಲ. ಈ ಹಿಂದಿನ ಸರ್ಕಾರಗಳು ಯಾವುದೇ ಒತ್ತುವರಿ ತೆರವು ವಿಚಾರದಲ್ಲಿ ಗಂಭೀರ ಕ್ರಮ ಕೈಗೊಂಡಿರಲಿಲ್ಲ ಮಳೆ ನಿಂತ ಬಳಿಕ ಒತ್ತುವರಿ ತೆರವು ನಿಂತು ಹೋಗುತ್ತಿತ್ತು. ನೆರೆ ಹಾವಳಿ ನಮಗೆ ಪಾಠ ಕಲಿಸಿದ್ದು ಯಾವುದಕ್ಕೂ ಬಗ್ಗೆ ಒತ್ತುವರಿ ತೆರವು ಮಾಡುತ್ತೇವೆ ಎಂದು ಹೇಳಿದರು.