ರಸ್ತೆ ಗುಂಡಿ ಅಪಘಾತ, ತಾಂತ್ರಿಕ ಕಾರಣ ನೀಡದೆ ಎಫ್‍ಐರ್ ದಾಖಲಿಸಿ : ಹೈಕೋರ್ಟ್

Social Share

ಬೆಂಗಳೂರು,ಡಿ.15- ರಾಜಧಾನಿ ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳಿಂದ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡವರು ಮತ್ತು ಸಾವನ್ನಪ್ಪುವ ಪ್ರಕರಣಗಳಲ್ಲಿ ದೂರು ದಾಖಲಿಸಲು ಬರುವ ಸಾರ್ವಜನಿಕರಿಗೆ ತಾಂತ್ರಿಕ ಕಾರಣಗಳನ್ನು ನೀಡದೆ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ಯಾವುದೇ ತಾಂತ್ರಿಕ ಕಾರಣಗಳನ್ನು ನೀಡದೆ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂದು ಗೃಹ ಇಲಾಖೆಗೆ ಸೂಚಿಸಿದೆ.

ರಸ್ತೆಗುಂಡಿಯಿಂದ ಅಪಘಾತಕ್ಕೊಳಗಾದವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಬಹುದು. ಇಂತಹ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ತಾಂತ್ರಿಕ ಕಾರಣಗಳನ್ನು ನೀಡಿ ವಾಪಸಾಗುವಂತೆ ಮಾಡಬಾರದು. ಘಟನೆ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಬೇಕು ಎಂದು ನ್ಯಾಯಪೀಠ ಹೇಳಿದೆ.

ಬಿಎಸ್‍ವೈ ಜತೆ ಭಿನ್ನಾಭಿಪ್ರಾಯ ಇಲ್ಲ : ಬೊಮ್ಮಾಯಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮುಂದಿನ ಎಂಟು ವಾರಗಳಲ್ಲಿ ರಸ್ತೆಗುಂಡಿಗಳ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ಸಲ್ಲಿಸುವುದು. ಈ ಸಂಬಂಧದ ಎಲ್ಲ ದಾಖಲೆಗಳ ಪ್ರತಿಗಳನ್ನು ಬಿಬಿಎಂಪಿ ಎನ್‍ಎಚ್‍ಎಐನ ಪರಿಶೀಲನಾ ಸಮಿತಿಗೆ ಲಭ್ಯವಾಗುವಂತೆ ಮಾಡಬೇಕು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು 2023ರ ಫೆಬ್ರವರಿ 3ರಂದು ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಫೆ.6ಕ್ಕೆ ಮುಂದೂಡಿತು.

ನನಗೆ ನನ್ನದೇ ಆದ ಶಕ್ತಿ ಇದೆ : ಎಚ್ಚರಿಕೆ ಸಂದೇಶ ರವಾನಿಸಿದ ಬಿಎಸ್‌ವೈ

ಯಂತ್ರದ ಮೂಲಕ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗುತ್ತಿಗೆಯನ್ನು ಏಕಾಏಕಿ ವಜಾ ಮಾಡಿರುವುದನ್ನು ಪ್ರಶ್ನಿಸಿ ಅಮೆರಿಕನ್ ರೋಡ್ ಟ್ರಾನ್ಸ್‍ಪೆಪೋರ್ಟ್ ಸರ್ವೀಸ್ ಸಲ್ಲಿಸಿದ್ದ ಅರ್ಜಿಯನ್ನು ಇದೇ ವೇಳೆ ವಾಪಸ್ ಪಡೆಯಲಾಯಿತು.

ಅಮೆರಿಕನ್ ಕಂಪೆನಿ ಪರ ವಕೀಲರು ಅರ್ಜಿ ಹಿಂಪಡೆಯುವುದಾಗಿ ಮಾಡಿದ ಮನವಿಗೆ ನ್ಯಾಯಪೀಠ ಸಹಮತ ವ್ಯಕ್ತಪಡಿಸಿದರು.

Road pothole, accident, File FIR, High Court,

Articles You Might Like

Share This Article