ನವದೆಹಲಿ.ಅ.11- ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾ ರೇಸ್‍ನಲ್ಲಿ 1983ರ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್ ಬಿನ್ನಿ ಹೆಸರು ಕೇಳಿಬಂದಿದೆ.
ಸದ್ಯದಲ್ಲೇ ಅಧಿಕಾರ ಪೂರ್ಣಗೊಳಿಸಲಿರುವ ಸೌರವ್ ಗಂಗೂಲಿ ಅವರ ಸ್ಥಾನವನ್ನು ಬಿನ್ನಿ ತುಂಬಲಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.
ಜಯ್ ಶಾ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಇನ್ನು ರಾಜಿವ್ ಶುಕ್ಲಾ ಬಿಸಿಸಿಐ ಉಪಾಧ್ಯಕ್ಷರಾಗಲಿದ್ದು, ಐಪಿಎಲ್ ಅಧ್ಯಕ್ಷರಾಗಿ ಅರುಣ್ ಧುಮಾಲ್ ಆಯ್ಕೆಯಾಗಲಿದ್ದಾರೆ.
ಖಜಾಂಚಿ ಸ್ಥಾನಕ್ಕೆ ಆಶಿಶ್ ಶೆಲರ್ ಪಕ್ಕ ಎಂದು ಹೇಳಲಾಗಿದೆ. ಆದರೆ, ಅಧಿಕೃತ ಮಾಹಿತಿ ಬರಬೇಕಿದೆ ,ಸೌರವ್ ಗಂಗೂಲಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.