ಗಣಿ ಜಿಲ್ಲೆ ಬಳ್ಳಾರಿಗೆ ರೋಹಿಣಿ ಸಿಂಧೂರಿ ವರ್ಗಾವಣೆ ಸಾಧ್ಯತೆ..?
ಬೆಂಗಳೂರು,ಜ.6-ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಅವರನ್ನು ಗಣಿ ಜಿಲ್ಲೆ ಬಳ್ಳಾರಿಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ.ಯಾವುದೇ ಕ್ಷಣದಲ್ಲಿ ರೋಹಿಣಿ ಸಿಂಧೂರಿ ಮೈಸೂರಿನಿಂದ ಬಳ್ಳಾರಿಗೆ ವರ್ಗಾವಣೆಯಾಗುವುದು ಬಹುತೇಕ ಖಚಿತವಾಗಿದ್ದು, ಮುಖ್ಯಮಂತ್ರಿಗಳ ಆದೇಶ ಬಾಕಿಯಷ್ಟೇ ಉಳಿದಿದೆ.
ಈ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಸಿಎಟಿಯಲ್ಲಿ ಪ್ರಶ್ನಿಸಿದ್ದರು. ಸದ್ಯ ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಎಸ್.ಎಸ್.ನಕುಲ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿದ್ದಾರೆ.
ಅಲ್ಲದೆ ಖುದ್ದು ರೋಹಿಣಿ ಸಿಂಧೂರಿ ಅವರೇ ತಮ್ಮನ್ನು ಬಳ್ಳಾರಿಗೆ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೆರಡು ದಿನಗಳಲ್ಲಿ ಬಿಎಸ್ವೈ ಅವರು ರೋಹಿಣಿ ಸಿಂಧೂರಿ ಅವರನ್ನು ಬಳ್ಳಾರಿಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.