ನವದೆಹಲಿ,ಅ.19- ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ತಮ್ಮ ತಂಡ ಸೇರಿಕೊಳ್ಳಲು ಮುಂಬೈ-ಪುಣೆ ಎಕ್ಸ್‍ಪ್ರೆಸ್‍ವೇಯಲ್ಲಿ ಗಂಟೆಗೆ 200 ಕಿ.ಮೀ ವೇಗದಲ್ಲಿ ತಮ್ಮ ಕಾರು ಚಲಾಯಿಸಿದ್ದಾರೆ ಎಂದು ವರದಿಯಾಗಿದೆ.
ರೋಹಿತ್ ತಮ್ಮ ಲಂಬೋರ್ಗಿನಿ ಕಾರಿನಲ್ಲಿ ಗಂಟೆಗೆ 200 ಕಿ.ಮೀ ಹಾಗೂ ಒಂದು ಹಂತದಲ್ಲಿ 215 ಕಿಮೀ ವೇಗದಲ್ಲಿ ಕಾರು ಚಲಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿರುವ ಬಗ್ಗೆ ಸಂಚಾರ ಪೊಲೀಸ್ ಅಧಿಕಾರಿಗಳು ಚಿಂತಿತರಾಗಿದ್ದರು ಮತ್ತು ಪೊಲೀಸ್ ಬೆಂಗಾವಲು ತಂಡದೊಂದಿಗೆ ತಂಡದ ಬಸ್‍ನಲ್ಲಿ ಪ್ರಯಾಣಿಸಲು ಸೂಚಿಸಿದರು ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.
ಡಾಬರ್ ಉತ್ಪನ್ನಗಳ ವಿರುದ್ಧ ಅಮೆರಿಕ, ಕೆನಡಾದಲ್ಲಿ ಕೇಸ್
ಆಸ್ಟ್ರೇಲಿಯಾ ವಿರುದ್ಧದ ಭಾರತದ ಟೂರ್ನಮೆಂಟ್ ಆರಂಭಿಕ ಪಂದ್ಯದಲ್ಲಿ ನಿರಾಶಾದಾಯಕ ಆಟದ ನಂತರ, ಅವರು ಅಫ್ಗಾನಿಸ್ತಾನ ಮತ್ತು ಪಾಕಿಸ್ತಾನದ ವಿರುದ್ಧದ ಮುಂದಿನ ಎರಡು ಪಂದ್ಯಗಳಲ್ಲಿ ಶತಕ ಮತ್ತು ಅರ್ಧ ಶತಕವನ್ನು ಗಳಿಸಿದರು, ಭಾರತಕ್ಕೆ 273 ಮತ್ತು 192 ರನ್‍ಗಳ ಗುರಿಯನ್ನು ಬೆನ್ನಟ್ಟಲು ಸಹಾಯ ಮಾಡಿದರು.
ಶರ್ಮಾ ಮೂರು ಪಂದ್ಯಗಳಲ್ಲಿ 72.33 ಸರಾಸರಿಯಲ್ಲಿ 217 ರನ್ ಗಳಿಸುವ ಮೂಲಕ ಪಂದ್ಯಾವಳಿಯಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅವರು ಎರಡು ದಾಖಲೆಗಳನ್ನು ಮುರಿದರು: ಎಲ್ಲಾ ಮೂರು ಸ್ವರೂಪಗಳಲ್ಲಿ ಆಟಗಾರನಿಂದ ಬಾರಿಸಿದ ಅತಿ ಹೆಚ್ಚು ಸಿಕ್ಸರ್‍ಗಳು ಮತ್ತು ವಿಶ್ವಕಪ್ ಇತಿಹಾಸದಲ್ಲಿ ಒಬ್ಬ ಆಟಗಾರ ಗಳಿಸಿದ ಅತಿ ಹೆಚ್ಚು ಶತಕಗಳು.
ಇರಾಕ್‍ನಲ್ಲಿನ ಅಮೆರಿಕ ನೆಲೆಗಳ ಮೇಲೆ ಡ್ರೋನ್ ದಾಳಿ
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ ಇಂದು ನಾಲ್ಕನೇ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡಲಿದೆ.