ನನ್ನ ಕುಟುಂಬ ಉಳಿಸಿಕೊಳ್ಳಲು ಹೋರಾಟ :ಮತ್ತೆ ಗುಡುಗಿದ ರೂಪಾ..

Social Share

ಬೆಂಗಳೂರು,ಫೆ.22- ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ತಡೆಯಲು ಸಾಧ್ಯವಿಲ್ಲ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಂದು ಪೋಸ್ಟ್ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ.

ಮಾಧ್ಯಮಗಳ ಮುಂದೆ ಇಲ್ಲವೇ ಸಾಮಾಜಿಕ ಜಾಲತಾಣಗಳಲ್ಲಿ ಪೆಫೋಸ್ಟ್ ಮಾಡಿದರೆ ಅಖಿಲ ಭಾರತ ಸೇವಾ ನಿಯಮ ಉಲ್ಲಂಘನೆ ಎಂದೇ ಪರಿಗಣಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ಕೊಟ್ಟರೂ ಸುಮ್ಮನಾಗದ ರೂಪಾ ಅವರು ಇಂದು ಮತ್ತೆ ರೋಹಿಣಿ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ.

ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ

ರೋಹಿಣಿ ಸಿಂಧೂರಿ ವಿರುದ್ಧ ನಾನು ಎತ್ತಿರುವ ಭ್ರಷ್ಟಾಚಾರದ ವಿಷಯದ ಬಗ್ಗೆ ಹೆಚ್ಚು ಚರ್ಚೆಯಾಗಬೇಕು. ಜನಸಾಮಾನ್ಯರ ಮೇಲೆ ಪ್ರಭಾವ ಬೀರುವ ಭ್ರಷ್ಟಾಚಾರ ವಿರುದ್ಧದ ಹೋರಾಟವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ.

ಕರ್ನಾಟಕದ ಒಬ್ಬ ಐಎಎಸ್ ಅಧಿಕಾರಿ ಸತ್ತರು. ತಮಿಳುನಾಡಿನಲ್ಲಿ ಒಬ್ಬ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಕರ್ನಾಟಕದ ಮತ್ತೊಬ್ಬ ಐಎಎಸ್ ಅಧಿಕಾರಿಯ ಕುಟುಂಬ ಈಗಾಗಲೇ ವಿಚ್ಛೇದನ ಪಡೆದಿದ್ದು, ನಾನು ಮತ್ತು ನನ್ನ ಪತಿ ಇನ್ನು ಒಟ್ಟಿಗೆ ಇದ್ದೇವೆ. ನಮ್ಮ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಈ ರೀತಿ ಅನೇಕ ಕುಟುಂಬಗಳ ನಾಶಕ್ಕೆ ಕಾರಣವಾಗುತ್ತಿರುವವರನ್ನು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನು ಹಲವು ಕುಟುಂಬಗಳು ನಾಶವಾಗುತ್ತವೆ ಎಂದಿದ್ದಾರೆ.

ಗೋವಾಕ್ಕೆ ಗೋಮಾಂಸ ರಫ್ತು ಮಾಡುತ್ತಿರುವುದಾಗಿ ಒಪ್ಪಿಕೊಂಡ ರಾಜ್ಯ ಸರ್ಕಾರ

ನಾನು ಬಲವಾದ ಮಹಿಳೆ ಹೋರಾಟ ಮಾಡುತ್ತೇನೆ. ಎಲ್ಲ ಮಹಿಳೆಯರಿಗೂ ಹೋರಾಟ ನಡೆಸುವ ಶಕ್ತಿ ಇರುವುದಿಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರು ವಾಸಿಯಾಗಿದೆ. ಅದನ್ನು ಮುಂದುವರೆಸೋಣ ಎಂದು ರೂಪಾ ಅವರು ರೋಹಿಣಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

Roopa Moudgil, Rohini Sindhuri, Fight, Facebook,

Articles You Might Like

Share This Article