Sunday, November 24, 2024
Homeಬೆಂಗಳೂರು8 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಖಾಕಿ ಬಲೆಗೆ

8 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಖಾಕಿ ಬಲೆಗೆ

ಬೆಂಗಳೂರು, ಏ.12- ಹದಿನೈದು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸವನಗುಡಿಯ ಸನ್ನಿದಿ ರಸ್ತೆಯಲ್ಲಿ ರೌಡಿ ರೋಹಿತ್ ಅಲಿಯಾಸ್ ರಘು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತ 2016-2017ನೇ ಸಾಲಿನಲ್ಲಿ ದಾಖಲಾಗಿದ್ದ 2 ದರೋಡೆ ಪ್ರಕರಣಗಳು ಹಾಗೂ ಒಂದು ಕಳುವು ಪ್ರಕರಣ ಪತ್ತೆಯಾಗಿವೆ.

ತನಿಖೆಯನ್ನು ಮುಂದುವರೆಸಿ, ವಶಕ್ಕೆ ಪಡೆದ ರೌಡಿಯನ್ನು ವಿಚಾರಣೆಗೊಳ ಪಡಿಸಿದಾಗ, ಆತನ ವಿರುದ್ಧ ನಗರದಲ್ಲಿ 2016 ಮತ್ತು 2017ನೇ ಸಾಲಿನಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ದರೋಡೆ ಯತ್ನ, ದರೋಡೆ ಹಾಗೂ ರಾಬರಿ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಈತನ ವಿರುದ್ಧ ಕಾನೂನು ಕ್ರಮ ಜರುಗಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಯ ಬಂಧನದಿಂದ ಜೆ.ಪಿ.ನಗರ ಪೊಲೀಸ್ ಠಾಣೆಯ 2, ಚೆನ್ನಮ್ಮನಕೆರೆ ಪೊಲೀಸ್ ಠಾಣೆಯ 2, ಜಯನಗರ 2, ವಿವಿ ಪುರಂ 2, ಹನುಮಂತನಗರ, ಸಿದ್ದಾಪುರ, ಎಸ್.ಜಿ.ಪಾಳ್ಯ, ಬೆಳ್ಳಂದೂರು ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣದಲ್ಲಿ ಭಾಗಿಯಾಗಿ ರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಇನ್ಸ್ಪೆಕ್ಟರ್ ಸವಿತಾ ಹಾಗೂ ಸಿಬ್ಬಂದಿ ತಂಡ ರೌಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿಶೀಟರ್ ಬಂಧನ
ದರೋಡೆ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ 8 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರೌಡಿಶೀಟರ್ಗೆ ಬಸವನಗುಡಿ ಠಾಣಾ ಪೊಲೀಸರು ಎಡೆಮುರಿ ಕಟ್ಟಿದ್ದಾರೆ. ಮೋಹನ್ ಬಂಧಿತ ರೌಡಿ. ಈತನ ವಿರುದ್ಧ ಬಸವನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012 ರಲ್ಲಿ ಒಂದು ದರೋಡೆ ಪ್ರಕರಣ ಮತ್ತು 2009 ರಲ್ಲಿ ಹಲ್ಲೆ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ತಲೆಮರೆಸಿ ಕೊಂಡಿದ್ದ ರೌಡಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದು ಸುದೀರ್ಘವಾಗಿ ವಿಚಾರಣೆ ನಡೆಸಿದಾಗ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ 2, ಬನಶಂಕರಿ ಠಾಣೆಯಲ್ಲಿ 2, ಮೈಕೊ ಲೇಔಟ್ನಲ್ಲಿ 2, ಶಿಡ್ಲಘಟ್ಟ 1, ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ತಳಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಸೇರಿದಂತೆ 10 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.

ಬೆಂಗಳೂರು ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ಲೋಕೇಶ್ ಬರಮಪ್ಪ ಜಗಲಾಸರ್ ಅವರು ನಿರ್ದೇಶನದಂತೆ ಜಯನಗರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಾರಾಯಣ ಸ್ವಾಮಿ ಮಾರ್ಗದರ್ಶನದಲ್ಲಿ ಬಸವನಗುಡಿ ಠಾಣೆಯ ಇನ್ಸ್ಪೆಕ್ಟರ್ ಸವಿತಾ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು 8 ವರ್ಷಗಳಿಂದ ತಲೆಮರೆಸಿಕೊಂಡಿ ರೌಡಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

RELATED ARTICLES

Latest News