Wednesday, December 18, 2024
Homeರಾಜ್ಯಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಅಧಿಕ ರಾಜಸ್ವ ಸಂಗ್ರಹ ಗುರಿ : ಸಚಿವ ಕೃಷ್ಣ ಭೈರೇಗೌಡ

ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಅಧಿಕ ರಾಜಸ್ವ ಸಂಗ್ರಹ ಗುರಿ : ಸಚಿವ ಕೃಷ್ಣ ಭೈರೇಗೌಡ

Krishna Byre Gowda

ಬೆಳಗಾವಿ, ಡಿ.18- ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15,145.32 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆ ಆಗಿದ್ದು,ಈ ಬಾರಿ ಕಳೆದ ಸಾಲಿಗಿಂತ ಹೆಚ್ಚು ರಾಜಸ್ವ ಸಂಗ್ರಹಣೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ವಿಧಾನಪರಿಷತ್ತಿನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ಸಾಲಿಗಿಂತ ಶೇ. 20 ರಷ್ಟು ಹೆಚ್ಚು ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಭೌತಿಕ ಖಾತೆ ಬಳಸಿ ನೋಂದಣಿ ಮಾಡುತ್ತಿದ್ದ ಸಂದರ್ಭದಲ್ಲಿ ಸುಳ್ಳು ಗುರುತಿನ ಚೀಟಿ ಸೃಷ್ಟಿಸಿಕೊಂಡು, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಆಸ್ತಿ, ಅಮಾಯಕರ ಆಸ್ತಿಗಳನ್ನು ಬೇರೊಬ್ಬರ ಹೆಸರಿಗೆ ನೋಂದಣಿಯಾಗುತ್ತಿದ್ದ ಐಞಛ್ಟಿಟ್ಞಠಿಜಿಟ್ಞ, ವಂಚನೆ ನೊಂದಣಿಗಳನ್ನು ಪ್ರಕರಣಗಳನ್ನು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನುಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದರು.

ಇ-ಖಾತಾ ಸಂಯೋಜನೆಯ ನಂತರ ಕಾನೂನು ಬಾಹಿರ ಮತ್ತು ಬೊಟ್ಟಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಸಿಕೊಳ್ಳುತ್ತಿದ್ದ ದಸ್ತಾವೇಜುಗಳ ಸಂಖ್ಯೆ ಕಡಿಮೆಯಾಗಿದ್ದು, ಕಾನೂನು ಬದ್ದವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿರುವುದಿಲ್ಲ ಎಂದು ತಿಳಿಸಿದರು.

RELATED ARTICLES

Latest News