ಬೆಂಗಳೂರು: ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವ ಜತೆಗೆ ಸ್ಮಾರ್ಟ್ ಮೀಟರ್‌ಗಳಿಗೆ ದುಬಾರಿ ದರ ನಿಗದಿ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
39 ಲಕ್ಷ ಸ್ಮಾರ್ಟ್ ಮೀಟರ್‌ಗಳನ್ನು ದುಬಾರಿ ಬೆಲೆಗೆ ಖರೀದಿಸಲಾಗುತ್ತಿದ್ದು, ಇದರಿಂದಾಗಿ ರಾಜ್ಯ ಖಜಾನೆಯ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಇದೊಂದು ಹಗರಣ ಎಂದು ನಿಖಿಲ್ ಅವರು ಆರೋಪಿಸಿದರು.
₹1,500 ಬೇಕೆಯಂತೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಸರಳ ಸ್ಮಾರ್ಟ್ ಮೀಟರ್ ಅನ್ನು ₹4,998ರೂ ಬೆಲೆಗೆ ಹೇಗೆ ಖರೀದಿಸಲಾಗುತ್ತಿದೆ ಎಂದು ನಿಖಿಲ್ ಪ್ರಶ್ನಿಸಿರುವ. ಹೆಚ್ಚುವರಿ ಹಣ ಎಲ್ಲಿಗೆ ಹೋಗುತ್ತಿದೆ? ಈ ಹಗಲು ದರೋಡೆಯಿಂದ ಯಾರು ಲಾಭ ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಕೆಟಿಟಿಪಿ ನಿಯಮ ಉಲ್ಲಂಘಿಸಿ ಅನರ್ಹರಿಗೆ ಟೆಂಡರ್ ನೀಡಿ ₹7,500 ಕೋಟಿ ರೂ. ಬೃಹತ್ ಹಗರಣ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಗ್ರಹಿಸಿದರು.