RSS ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ, ಎನ್ಐಎ ತನಿಖೆ ಮುಂದುವರಿಕೆ
ಬೆಂಗಳೂರು, ಏ.7-ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಮುಂದುವರೆಸಲು ಹೈಕೋರ್ಟ್ ವಿಭಾಗೀಯ ಪೀಠ ಆದೇಶಿಸಿದೆ. ಶಿವಾಜಿನಗರದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿತ್ತು. ಇದನ್ನು ಆಕ್ಷೇಪಿಸಿ ಕೇಂದ್ರ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಎನ್ಐಎ ತನಿಖೆ ಮುಂದುವರೆಸಲು ಮಧ್ಯಂತರ ಆದೇಶ ನೀಡಿದೆ. ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಭಾರೀ ಪ್ರತಿಭಟನೆ, ವಿರೋಧಗಳು ವ್ಯಕ್ತವಾಗಿದ್ದವು. ತೀವ್ರ ತನಿಖೆ ನಡೆಸಿದ ಪೊಲೀಸರು ಪ್ರಕರಣದಲ್ಲಿ ಹಲವರನ್ನು ಬಂಧಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿತ್ತು.
< Eesanje News 24/7 ನ್ಯೂಸ್ ಆ್ಯಪ್ >