ಬೆಂಗಳೂರು,ಡಿ.9- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಪುಟದ ಸಹೋದ್ಯೋಗಿಗಳ ಜೊತೆ ಅವರ ಜೊತೆ ಆರ್‌ಎಸ್‌ಎಸ್ ನಾಯಕ ಮುಕುಂದ್ ಅವರು ಗುಪ್ತ ಮಾತುಕತೆ ನಡೆಸಿದ್ದಾರೆ. ಆರ್‍ಟಿನಗರದ ನಿವಾಸಕ್ಕೆ ಬೆಳಗ್ಗೆಯೇ ಆಗಮಿಸಿದ ಮುಕುಂದ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಿಎಂ ಜೊತೆ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದರು.
ಇದರ ಬೆನ್ನಲ್ಲೇ ಸಚಿವರಾದ ವಿ.ಸೋಮಣ್ಣ, ಶಿವರಾಮ್ ಹೆಬ್ಬಾರ್ ಹಾಗೂ ಕೆಲವು ಶಾಸಕರು ಆಗಮಿಸಿದ್ದು ಕುತಹಲಕ್ಕೆ ಕಾರಣವಾಯಿತು. ಮೂಲಗಳ ಪ್ರಕಾರ ಪಕ್ಷ ಸಂಘಟನೆ, ಜನಸಂಕಲ್ಪ ಯಾತ್ರೆ, ಸಚಿವರ ಕಾರ್ಯ ವೈಖರಿ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಬ್ರೇಕ್, ಕಟೀಲ್ ಮುಂದುವರಿಕೆ
ವರಿಷ್ಠರ ಸೂಚನೆ ಮೇರೆಗೆ ಮುಕುಂದ್ ಸಿಎಂ ಅವರನ್ನು ಭೇಟಿಯಾಗಲು ಆಗಮಿಸಿದ್ದರು. ಸರ್ಕಾರ ಮತ್ತು ಪಕ್ಷಕ್ಕೆ ಆಗಾಗ್ಗೆ ಸಲಹೆ ಮತ್ತು ನಿರ್ದೇಶನಗಳನ್ನು ಸಂಘ ಪರಿವಾರದ ನಾಯಕರು ನೀಡುತ್ತಲೇ ಇರುತ್ತಾರೆ.
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು, ಫಲಾನುಭವಿಗಳಿಗೆ ನೇರವಾಗಿ ತಲುಪಿಸುವುದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವಂತಹ ತಂಡವನ್ನು ರಚಿಸುವಂತೆ ಮುಕುಂದ್ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಿಮಾಚಲ ಗೆದ್ದ ಕಾಂಗ್ರೆಸ್ : ಸಿಎಂ ಆಯ್ಕೆ ಗೊಂದಲದ ನಡುವೆ ಆಪರೇಷನ್ ಭಯ
ಗುಜರಾತ್‍ನಲ್ಲಿ ಇದೇ ತಂತ್ರವನ್ನು ಅನುಸರಿಸಿದ ಪರಿಣಾಮ ಪಕ್ಷ ಸತತ 7ನೇ ಬಾರಿಗೆ ಗೆದ್ದು ಅಧಿಕಾರ ಹಿಡಿಯಲು ಕಾರಣವಾಯಿತು. ಇದೇ ಮಾದರಿಯನ್ನು ಮುಂದಿಟ್ಟುಕೊಂಡು ಕೆಲವು ತಂತ್ರಗಳನ್ನು ಅಳವಡಿಸಿಕೊಂಡರೆ ಗೆಲ್ಲಲು ಸುಗಮವಾಗುತ್ತದೆ ಎಂದು ಹೇಳಿದ್ದಾರೆ.
RSS leader, Mukund, CM Bommai, meeting,