ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ

Social Share

ಹಾವೇರಿ,ಅ.12- ಪಥಸಂಚಲನ ನಡೆಸುತ್ತಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆದಿದೆ. ಓರ್ವ ಆರ್‌ಎಸ್‌ಎಸ್‌ ಕಾರ್ಯಕರ್ತನ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದಾನೆ. ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಸುವ ಸಲುವಾಗಿ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಅನ್ಯ ಕೋಮಿನ ಯುವಕರು ಏಕಾಏಕಿ ಆರ್‍ಎಸ್‍ಎಸ್ ಕಾರ್ಯಕರ್ತರ ಮೇಲೆ ಮುಗಿಬಿದ್ದು, ಹಲ್ಲೆ ನಡೆಸಿದ್ದಾರೆ.

ಪಟ್ಟಣದಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗಕ್ಕೆ ಬಂದಿದ್ದ ಆರ್‌ಎಸ್‌ಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಘಟನೆಗೆ ಸಂಬಂಧ ಅನ್ಯಕೋಮಿನ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಹಾವೇರಿ ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪಟ್ಟಣದಲ್ಲಿ ಪರಿಸ್ಥಿತಿ ಶಾಂತ ಸ್ಥಿತಿಯಲ್ಲಿ ಇದೆ. ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Articles You Might Like

Share This Article