Thursday, June 12, 2025
Homeರಾಷ್ಟ್ರೀಯ | Nationalಪ್ರಧಾನಿ ಮೋದಿ ಭೇಟಿಗೂ ಮುನ್ನ ಕೋವಿಡ್‌ ಪರೀಕ್ಷೆ ಕಡ್ಡಾಯ

ಪ್ರಧಾನಿ ಮೋದಿ ಭೇಟಿಗೂ ಮುನ್ನ ಕೋವಿಡ್‌ ಪರೀಕ್ಷೆ ಕಡ್ಡಾಯ

ನವದೆಹಲಿ,ಜೂ.11- ಇನ್ನು ಮುಂದೆ ಪ್ರಧಾನಿ ನರೇಂದ್ರಮೋದಿ ಭೇಟಿ ಮಾಡುವ ಸಚಿವರು ಕಡ್ಡಯವಾಗಿ ಆರ್‌ಟಿ-ಪಿಸಿಆರ್‌ ಪರೀಕ್ಷೆಗೆ ಒಳಗಾಗಬೇಕು. ಏಕೆಂದರೆ ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುನ್ನಚ್ಚರಿಕೆಯ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಸಚಿವರಿಗೆ ಆರ್ಟಿ-ಪಿಸಿಆರ್‌ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್‌ -19 ಪ್ರಕರಣಗಳು 7,000 ದಾಟಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು 306 ಹೊಸ ಪ್ರಕರಣಗಳು ಮತ್ತು ಆರು ಸಾವುಗಳಿಗೆ ಸಾಕ್ಷಿಯಾಗಿದೆ.
ಕೇರಳದಲ್ಲಿ ಮೂರು ಸಾವುಗಳು ದಾಖಲಾಗಿದ್ದರೆ, ಮಹಾರಾಷ್ಟ್ರ (1) ಮತ್ತು ಕರ್ನಾಟಕ (2) ಒಂದೇ ಅವಧಿಯಲ್ಲಿ ಉಳಿದ ಸಾವುಗಳನ್ನು ವರದಿ ಮಾಡಿದ ಏಕೈಕ ರಾಜ್ಯಗಳಾಗಿವೆ.

ಕೇರಳದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದ್ದು, 170 ಹೊಸ ಪ್ರಕರಣಗಳು ವರದಿಯಾಗಿವೆ. ಏತನಧ್ಯೆ, ಗುಜರಾತ್‌ನಲ್ಲಿ 114 ಹೊಸ ಸೋಂಕುಗಳು ಮತ್ತು 1,223 ಸಕ್ರಿಯ ಪ್ರಕರಣಗಳು ದಾಖಲಾಗಿವೆ, ನಂತರದ ಸ್ಥಾನದಲ್ಲಿ ಕರ್ನಾಟಕವಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 66 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರದ ಒಟ್ಟು ಪ್ರಕರಣಗಳ ಸಂಖ್ಯೆ 757 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

RELATED ARTICLES

Latest News