ಬೆಂಗಳೂರು, ಜ.6- ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ಕೇರಳ, ಮಹಾರಾಷ್ಟ್ರ, ಗೋವಾದಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದನ್ನು ಕೆಎಸ್ಆರ್‌ಟಿಸಿ ಕಡ್ಡಾಯ ಮಾಡಿದೆ.
ಕೋವಿಡ್ ಲಸಿಕೆ ಎರಡು ಡೋಸ್‍ಗಳನ್ನು ಪಡೆದಿರಲಿ ಅಥವಾ ಪಡೆಯದಿರಲಿ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್‍ಟಿಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ ಎಂದು ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ್ ತಿಳಿಸಿದ್ದಾರೆ.
ಈ ಬಗ್ಗೆ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳುವಳಿಕೆ ನೀಡಿ ಕ್ರಮ ಕೈಗೊಳ್ಳಲು ಅೀನ ಅಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಚಾಲನಾ ಸಿಬ್ಬಂದಿ ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸೋಂಕು ಹರಡದಂತೆ ತಡೆಗಟ್ಟಲು ಜಾರಿ ಮಾಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು.
ರಾತ್ರಿ ಸಾರಿಗೆ ಸೇವೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಆನ್‍ಲೈನ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಅಳವಡಿಸಬೇಕು. ಮುಂಗಡ ಟಿಕೆಟ್ ಕಾಯ್ದಿರಿಸುವಿಕೆಯನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸಬೇಕು ಎಂದು ಅವರು ಸೂಚಿಸಿದ್ದಾರೆ.
ವಾರಾಂತ್ಯ ಕಫ್ರ್ಯೂ ಹಾಗೂ ರಾತ್ರಿ ಕಫ್ರ್ಯೂ ಸಂದರ್ಭದಲ್ಲಿ ವಾಣಿಜ್ಯ ವಹಿವಾಟು ಕುಂಠಿತಗೊಂಡು ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಎಲ್ಲ ಅನುಸೂಚಿಗಳನ್ನು ಕಾರ್ಯಾಚರಣೆ ಮಾಡುವುದು ಸೂಕ್ತವಲ್ಲ. ಪ್ರಯಾಣಿಕರ ಸಂಖ್ಯೆಗನುಗುಣವಾಗಿ ಬಸ್‍ಗಳ ವ್ಯವಸ್ಥೆ ಒದಗಿಸಬೇಕು ಎಂದು ಅವರು ನಿರ್ದೇಶಿಸಿದ್ದಾರೆ.
