ಪಾಟ್ನಾ, ಜು.13- ಬಿಹಾರದ ಪಾಟ್ನಾದ ಪಿಪ್ರಾ ಪ್ರದೇಶದಲ್ಲಿ ಕಳೆದ ರಾತ್ರಿ ಗ್ರಾಮೀಣ ಆರೋಗ್ಯ ಅಧಿಕಾರಿಯೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಮೃತರನ್ನು ಸುರೇಂದ್ರ ಕುಮಾರ್ (50) ಎಂದು ಗುರುತಿಸಲಾಗಿದೆ.
ಶೇಖ್‌ಪುರ ಗ್ರಾಮದಲ್ಲಿ ಕಳೆದ ರಾತ್ರಿ ಕುಮಾರ್ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ,ಗುಂಡೇಟಿನ ಶಬ್ದಗಳು ಕೇಳಿಬಂದ ಹಿನ್ನಲೆಯಲ್ಲಿ ಗ್ರಾಮದ ಜನರು ಅಲ್ಲಿಗೆ ಹೋದಾಗ, ಅಧಿಕಾರಿ ಗುಂಡೇಟಿನಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಡಿಸಿಪಿ ಮಸೌರ್ಹಿ, ಕನ್ಹಯ್ಯಾ ಸಿಂಗ್ ವರದಿಗಾರರಿಗೆ ತಿಳಿಸಿದರು.
ಕುಮಾರ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ=ಯ ಸಮಯದಲ್ಲಿ ಸಾವನ್ನಪ್ಪಿದರು ಎಂದು ಸಿಂಗ್ ಹೇಳಿದರು.ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.ಕಳೆದ ಒಂದು ವಾರದಲ್ಲಿ ರಾಜ್ಯ ರಾಜಧಾನಿಯನ್ನು ಬೆಚ್ಚಿಬೀಳಿಸಿರುವ ಸರಣಿ ಕೊಲೆಗಳ ಬೆನ್ನಲ್ಲೇ ಈ ಘಟನೆ ನಡೆದಿದೆ.
ಜುಲೈ 4 ರಂದು ರಾಜ್ಯ ರಾಜಧಾನಿಯಲ್ಲಿ ಉನ್ನತ ಕೈಗಾರಿಕೋದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆಯಾದ ಒಂದು ವಾರದೊಳಗೆ, ಜುಲೈ 10 ರಂದು ಪಾಟ್ನಾದ ರಾಣಿತಲಾಬ್ ಪ್ರದೇಶದಲ್ಲಿ ಮರಳು ಗಣಿಗಾರಿಕೆ ವ್ಯವಹಾರದಲ್ಲಿ ತೊಡಗಿದ್ದ 50 ವರ್ಷದ ವ್ಯಕ್ತಿಯನ್ನು ಅವರ ನಿವಾಸದ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು.ಜುಲೈ 11 ರಂದು ಪಾಟ್ನಾದ ರಾಮಕೃಷ್ಣ ನಗರ ಪ್ರದೇಶದಲ್ಲಿ ದಿನಸಿ ಅಂಗಡಿಯ ಮಾಲೀಕನನ್ನು ಅಪರಿಚಿತ ವ್ಯಕ್ತಿಯೊಬ್ಬರು ಗುಂಡಿಕ್ಕಿ ಕೊಂದರು.
- ಪೊಲೀಸ್ ಕಸ್ಟಡಿ ಸಾವು ವಿರೋಧಿಸಿ ಬೀದಿಗಿಳಿದ ವಿಜಯ್
- ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ
- ಬೆಳಗಾವಿ : ನಡು ರಸ್ತೆಯಲ್ಲೇ ಯುವ ಗಾಯಕನ ಬರ್ಬರ ಹತ್ಯೆ
- ಕಿರು ತೆರೆ ನಟಿ ಶ್ರುತಿ ಮೇಲಿನ ಹಲ್ಲೆಗೆ ನೈಜ ಕಾರಣ ಬಿಚ್ಚಿಟ್ಟ ಪತಿ
- ಬಿಹಾರ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ..!