ರಷ್ಯಾದಲ್ಲಿ ಸ್ಪುಟ್ನಿಕ್-ವಿ ಕೋವಿಡ್ ಲಸಿಕೆ ಶೋಧಿಸಿದ ವಿಜ್ಞಾನಿಯ ಹತ್ಯೆ

Social Share

ಮಾಸ್ಕೋ,ಮಾ.4- ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್-ವಿ ಸಂಶೋಧನೆಗೆ ಸಹಾಯ ಮಾಡಿದ ವಿಜ್ಞಾನಿಗಳಲ್ಲಿ ಒಬ್ಬರಾದ ಆಂಡ್ರೆ ಬೊಟಿಕೋವ್ ಅವರನ್ನು ಇಲ್ಲಿನ ಅವರ ಅಪಾರ್ಟ್‍ಮೆಂಟ್‍ನಲ್ಲಿ ಬೆಲ್ಟ್‍ನಿಂದ ಕತ್ತು ಹಿಸುಕಿ ಹತ್ಯೆ ಮಾಡಲಾಗಿದ್ದು, ಕೊಲೆಗೆ ಸಂಬಂಧಿಸಿದಂತೆ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ.

ಗಮಲೇಯ ನ್ಯಾಷನಲ್ ರಿಸರ್ಚ್ ಸೆಂಟರ್ ಫಾರ್ ಎಕಾಲಜಿ ಅಂಡ್ ಮ್ಯಾಥಮ್ಯಾಟಿಕ್ಸ್‍ನಲ್ಲಿ ಹಿರಿಯ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದ 47 ವರ್ಷದ ಬೋಟಿಕೋವ್ ಅವರು ಗುರುವಾರ ತಮ್ಮ ಅಪಾರ್ಟ್‍ಮೆಂಟ್‍ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ರಷ್ಯಾದ ಸುದ್ದಿಸಂಸ್ಥೆಗಳು ವರದಿ ಮಾಡಿವೆ.

ಮೈಸೂರಿನಲ್ಲಿ ಮಾ.26ಕ್ಕೆ ಜೆಡಿಎಸ್ ಪಂಚರತ್ನ ಸಮಾರೋಪ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2021 ರಲ್ಲಿ ಕೋವಿಡ್ ಲಸಿಕೆ ಶೋಧಕ್ಕಾಗಿ ವೈರಾಲಜಿಸ್ಟ್‍ಗೆ ಆರ್ಡರ್ ಆಫ್ ಮೆರಿಟ್ ಫಾರ್ ದಿ ಫಾದರ್‍ಲ್ಯಾಂಡ್ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ವರದಿಗಳ ಪ್ರಕಾರ 2020 ರಲ್ಲಿ ಸ್ಪುಟ್ನಿಕ್-ವಿ ಲಸಿಕೆಯನ್ನು ಅಭಿವೃದ್ಧಿಪಡಿಸಿದ 18 ವಿಜ್ಞಾನಿಗಳಲ್ಲಿ ಬೊಟಿಕೋವ್ ಒಬ್ಬರು. ಅವರ ಸಾವನ್ನು ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ರಷ್ಯಾ ತನಿಖಾ ಪ್ರಾಧಿಕಾರವಾಗಿರುವ ಸಮಿತಿಯು ಟೆಲಿಗ್ರಾಮ್ ಹೇಳಿಕೆಯಲ್ಲಿ ತಿಳಿಸಿದೆ.

ತನಿಖಾಕಾಧಿರಿಗಳ ಪ್ರಕಾರ, 29 ವರ್ಷದ ಯುವಕನು ಜಗಳದ ಸಮಯದಲ್ಲಿ ಬೋಟಿಕೋವ್‍ರನ್ನು ¨ಲ್ಟ್‍ನಿಂದ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕೌಟುಂಬಿಕ ಹಿನ್ನೆಲೆ ಮತ್ತು ಸಂಘರ್ಷದ ಪರಿಣಾಮ ಕೊಲೆ ನಡೆದಿದೆ ಎಂದು ಕಾನೂನು ಜಾರಿ ಸಂಸ್ಥೆಗಳು ಹೇಳಿವೆ.

ಬೋಟಿಕೋವ್ ಅವರ ದೇಹ ಪತ್ತೆಯಾದ ಸ್ವಲ್ಪ ಸಮಯದ ನಂತರ ಶಂಕಿತನನ್ನು ಬಂಧಿಸಲಾಯಿತು ಎಂದು ಫೆಡರಲ್ ತನಿಖಾ ಸಂಸ್ಥೆ ಸ್ಪಷ್ಟಪಡಿಸಿದೆ.

ಮಹಾರಾಷ್ಟ್ರದ ಆರು ಕೆಮ್ಮು ಸಿರಪ್ ತಯಾರಕ ಕಂಪನಿಗಳ ಪರವಾನಗಿ ಅಮಾನತು

ವಿಚಾರಣೆಯ ಸಮಯದಲ್ಲಿ ಆರೋಪಿ ತನ್ನನ್ನು ತಾನು ತಪ್ಪಿತಸ್ಥನೆಂದು ಒಪ್ಪಿಕೊಂಡಿದ್ದಾನೆ. ಆರೋಪಿ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ದಾಖಲೆ ಹೊಂದಿದ್ದಾನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಣೆ ನಡೆಸಲಾಗುವುದು. ಆತನನ್ನು ಬಂಧನದಲ್ಲಿ ಇರಿಸಲು ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು ಎಂದು ತನಿಖಾ ಸಂಸ್ಥೆ ತಿಳಿಸಿದೆ.

Russian, Scientist, Andrey Botikov, COVID-19, Vaccine, Sputnik V, Strangled, Death,

Articles You Might Like

Share This Article