ಬೆಂಗಳೂರು,ಜ.30- ಬಿಬಿಎಂಪಿ ಮಾಜಿ ಉಪ ಮಹಾಪೌರ ಎಸ್. ಹರೀಶ್ ಅವರು ಬೆಂಗಳೂರು ಉತ್ತರ ಜಿಲ್ಲೆಯ ನೂತನ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯಾಲಯ ಬಾವೂರಾವ್ ದೇಶಪಾಂಡೆ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಸಂಘಟನಾತಕ ಜಿಲ್ಲೆಗಳಾದ ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಕೇಂದ್ರ ಜಿಲ್ಲೆಗೆ ನೂತನ ಜಿಲ್ಲಾಧ್ಯಕ್ಷರುಗಳ ಘೋಷಣೆ ಮಾಡಲಾಯಿತು.
ಬೆಂಗಳೂರು ಉತ್ತರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಉಪ ಮಹಾಪೌರರಾದ ಎಸ್ ಹರೀಶ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಸಪ್ತಗಿರಿಗೌಡ ಅವರನ್ನು ಘೋಷಿಸಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿಯ ಚುನಾವಣಾಧಿಕಾರಿಗಳಾದ ಶಾಸಕರ ರವಿ ಸುಬ್ರಹಣ್ಯ, ವಿಧಾನ ಪರಿಷತ್ ಸದಸ್ಯರು ಹಾಗೂ ಬೆಂಗಳೂರು ಕೇಂದ್ರ ಜಿಲ್ಲೆಯ ಚುನಾವಣಾಧಿಕಾರಿ ಗೋಪಿನಾಥರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕರಾದ ಕುಡುಚಿ ರಾಜೀವ್, ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ ಅವರು ಸೇರಿದಂತೆ ಹಲವು ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.