Tuesday, July 15, 2025
Homeಅಂತಾರಾಷ್ಟ್ರೀಯ | Internationalಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾದ ಜೈ ಶಂಕರ್

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾದ ಜೈ ಶಂಕರ್

S Jaishankar Meets Xi Jinping In China, First Since 2020 Galwan Clash

ಬೀಜಿಂಗ್, ಜು.15- ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಇಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಜೈಶಂಕರ್ ಅವರು ಭಾರತ-ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಷಿ ಅವರಿಗೆ ಮಾಹಿತಿ ನೀಡಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಶಾಂಫ್ಟ್ ಸಹಕಾರ ಸಂಸ್ಥೆಯ (ಎಸ್‌ಸಿಒ) ಸಮಾವೇಶದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವರು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಬಂದಿಳಿದರು. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ದ್ವಿಪಕ್ಷೀಯ ಸಂಬಂಧಗಳು ತೀವ್ರ ಕುಸಿತ ಕಂಡ ನಂತರ ಇದು ಅವರ ಮೊದಲ ಚೀನಾ ಭೇಟಿಯಾಗಿದೆ.

ಇಂದು ಬೆಳಿಗ್ಗೆ ಬೀಜಿಂಗ್‌ನಲ್ಲಿ ನನ್ನ ಸಹವರ್ತಿ ಎಸ್‌ಸಿಒ ವಿದೇಶಾಂಗ ಸಚಿವರೊಂದಿಗೆ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿದೆ ಎಂದು ಜೈಶಂಕರ್ ಎಕ್ಸ್ ಮಾಡಿದ್ದಾರೆ.ರಾಷ್ಟ್ರಪತಿ ದೌಪದಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಶುಭಾಶಯಗಳನ್ನು ತಿಳಿಸಿದ್ದೇನೆ ಎಂದು ಅವರು ಹೇಳಿದರು.

ನಮ್ಮ ದ್ವಿಪಕ್ಷೀಯ ಸಂಬಂಧಗಳ ಇತ್ತೀಚಿನ ಬೆಳವಣಿಗೆಯ ಬಗ್ಗೆ ಅಧ್ಯಕ್ಷ ಕ್ಷಿ ಅವರಿಗೆ ಮಾಹಿತಿ ನೀಡಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ನಾಯಕರ ಮಾರ್ಗದರ್ಶನವನ್ನು ಗೌರವಿಸುತ್ತೇನೆ ಎಂದು ವಿದೇಶಾಂಗ ಸಚಿವ ಹೇಳಿದರು.

RELATED ARTICLES

Latest News