Tuesday, February 11, 2025
Homeರಾಜ್ಯಎಸ್‌‍.ಎಂ.ಕೃಷ್ಣ ವಿಧಿವಶ : ಕಂಬನಿ ಮಿಡಿದ ಗಣ್ಯರು

ಎಸ್‌‍.ಎಂ.ಕೃಷ್ಣ ವಿಧಿವಶ : ಕಂಬನಿ ಮಿಡಿದ ಗಣ್ಯರು

S.M. Krishna passed away

ಪ್ರಧಾನಿ ಹಾಗೂ ರಾಷ್ಟಪತಿ ಸಂತಾಪ :
ಎಸ್‌‍.ಎಂ.ಕೃಷ್ಣ ಅವರ ನಿಧನಕ್ಕೆ ರಾಷ್ಟಪತಿ ದ್ರೌಪದಿ ಮುರ್ಮು, ಉಪ ರಾಷ್ಟಪತಿ ಜಗದೀಪ್‌ ಧನ್ಕರ್‌, ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌‍, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌‍.ಯಡಿಯೂರಪ್ಪ. ಹೆಚ್‌.ಡಿ ಕುಮಾರಸ್ವಾಮಿ , ಬಸವರಾಜ್‌ ಬೊಮಾಯಿ, ಡಿ.ವಿ ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಆಶೋಕ್‌, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಆರೂವರೆ ದಶಕಕ್ಕೂ ಹೆಚ್ಚು ಕಾಲ ರಾಜಕಾರಣದಲ್ಲಿದ್ದ ಎಸ್‌‍.ಎಂ.ಕೃಷ್ಣ ಅವರು ವಯಸ್ಸಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಲ್ಲೇಖಿಸಿ 7 ಜನವರಿ 2023 ರಂದು ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.ಕೆಲವು ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥರಾಗಿದ್ದ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾದ ಸುಮಾರು ಎರಡು ತಿಂಗಳ ನಂತರ ಎಸ್‌‍.ಎಂ .ಕೃಷ್ಣ ಅವರನ್ನು 2024ರ ಅಕ್ಟೋಬರ್‌ 19ರಂದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಮನೆಗೆ ಕರೆ ತರಲಾಗಿತ್ತು. ಸೋಮವಾರ ರಾತ್ರಿಯಿಂದಲೇ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿ ಕೊನೆಯುಸಿರೆಳೆದಿದ್ದಾರೆ.

*ಎಸ್‌‍ಎಂ ಕೃಷ್ಣ ನನಗೆ ಮಾರ್ಗದರ್ಶಕರಾಗಿದ್ದರು : ಸಿಎಂ ಸಿದ್ದರಾಮಯ್ಯ ಶೋಕ
ಮಾಜಿ ಮುಖ್ಯಮಂತ್ರಿ ಎಸ್‌‍ಎಂ ಕೃಷ್ಣ ಅವರ ನಿಧನದಿಂದ ದುಃಖವಾಗಿದೆ. ಕೇಂದ್ರ ಸಚಿವರಾಗಿ, ಮುಖ್ಯಮಂತ್ರಿಯಾಗಿ ಮತ್ತು ನಾಯಕರಾಗಿ ಅವರ ಅಪ್ರತಿಮ ಕೊಡುಗೆಗಳು ಅಳಿಸಲಾಗದ ಗುರುತು ಹಾಕಿವೆ. ಅವರಿಗೆ ಸದಾ ಋಣಿಯಾಗಿರುತ್ತೇನೆ, ವಿಶೇಷವಾಗಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಐಟಿ-ಬಿಟಿ ಕ್ಷೇತ್ರವನ್ನು ಪರಿವರ್ತಿಸುವಲ್ಲಿ ಅವರ ದೂರದೃಷ್ಟಿಯ ನಾಯಕತ್ವಕ್ಕಾಗಿ ಮತ್ತು ವಿರೋಧಿಗಳಿಲ್ಲದ ನಾಯಕ. ಶ್ರೀಕೃಷ್ಣ ಅವರು ಕಾಂಗ್ರೆಸ್‌‍ ಪಕ್ಷದಲ್ಲಿ ನನ್ನ ಆರಂಭಿಕ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದರು ಮತ್ತು ಅವರ ದೂರದೃಷ್ಟಿ, ಶಿಸ್ತಿನ ಜೀವನ ಮತ್ತು ದಯೆಯ ಸ್ವಭಾವವು ಮಹತ್ವಾಕಾಂಕ್ಷಿ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿದೆ ಈ ದುಃಖದ ಕ್ಷಣದಲ್ಲಿ ಅಭಿಮಾನಿಗಳು ಅವರ ಆತಕ್ಕೆ ಶಾಂತಿ ನೀಡಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಕ್‌್ಸನಲ್ಲಿ ಪೋಸ್ಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವರಾದ ಎಸ್‌‍ ಎಂ ಕೃಷ್ಣ ಅವರ ನಿಧನದಿಂದ ಅತೀವ ದುಃಖವಾಗಿದೆ. ಅಭಿವೃದ್ಧಿಯ ನಿಜವಾದ ಚಾಂಪಿಯನ್‌ , ಅವರು ರಾಜ್ಯ ಮತ್ತು ರಾಷ್ಟ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದರು. ಇದು ನನಗೆ ವೈಯಕ್ತಿಕ ನಷ್ಟವಾಗಿದೆ, ಏಕೆಂದರೆ ನಾವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಹೋದ್ಯೋಗಿಗಳಾಗಿ ಕೆಲಸ ಮಾಡಿದ್ದೇವೆ. ಅವರ ದೃಷ್ಟಿ, ಸಮರ್ಪಣೆ ಮತ್ತು ಅಸಾಧಾರಣ ಸಾರ್ವಜನಿಕ ಸೇವೆಯು ಕರ್ನಾಟಕದ ಪ್ರಗತಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ, ಆದರೆ ಜನಕಲ್ಯಾಣವನ್ನು ಅಭಿವೃದ್ಧಿಯೊಂದಿಗೆ ಸಮತೋಲನಗೊಳಿಸುವ ಅವರ ವಿಧಾನವು ಬೆಂಗಳೂರಿನ ಪರಿವರ್ತಕ ಮಾದರಿಯ ಮೇಲೆ ಜಾಗತಿಕ ಮುದ್ರೆಯನ್ನು ಹಾಕಿತು.ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

*ಎಸ್‌‍.ಎಂ.ಕೃಷ್ಣ ನಿಧನಕ್ಕೆ ಎಚ್‌.ಡಿ.ದೇವೇಗೌಡರು, ಕುಮಾರಸ್ವಾಮಿ ಸಂತಾಪ :
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಪಾಲ ಎಸ್‌‍.ಎಂ. ಕೃಷ್ಣ ಅವರ ನಿಧನಕ್ಕೆ ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ.ದೇವೇಗೌಡರು, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಮಾಜಿ ವಿದೇಶಾಂಗ ಸಚಿವರು ಹಾಗೂ ಪದವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್‌‍.ಎಂ. ಕೃಷ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು ಎಂದು ಗೌಡರು ಎ್ಸ್‌‍ನಲ್ಲಿ ತಿಳಿಸಿದ್ದಾರೆ.

ಕೃಷ್ಣ ಅವರ ಕುಟುಂಬದವರಂತೆ ನಾನೂ ಸಮಾನ ದುಃಖಿ. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಅವರ ಆತಕ್ಕೆ ಶಾಂತಿ ಸಿಗಲೆಂದು ಅವರು ಪ್ರಾರ್ಥಿಸಿದ್ದಾರೆ.ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹ್ದುೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ಧಿಗಳಾದ ಎಸ್‌‍.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಹಿರಿಯರು, ಮುತ್ಸದ್ಧಿಗಳಾದ ಎಸ್‌‍.ಎಂ.ಕೃಷ್ಣ ಅವರು ನಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು. ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.ಅಗಲಿದ ಅವರ ಆತಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

*ಚಲುವರಾಯಸ್ವಾಮಿ ಕಂಬನಿ : ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ. ದಕ್ಷ ಆಡಳಿತಗಾರ, ಚಿಂತಕ ಅಭಿವೃದ್ಧಿ ಹರಿಕಾರ ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರ ನಿಧನ ಅತೀವ ದುಃಖ ತಂದಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಕಂಬನಿ ಮಿಡಿದಿದ್ದಾರೆ.

ರಾಜ್ಯ ಹಾಗೂ ದೇಶದ ರಾಜಕಾರಣಕ್ಕೆ ಇದು ತುಂಬಲಾರದ ನಷ್ಟ. ರಾಜ್ಯದ ಅಭಿವೃದ್ಧಿಗೆ ಎಸ್‌‍.ಎಂ.ಕೃಷ್ಣ ಅವರ ಕೊಡುಗೆ ಅಪಾರ. ಅವರು ಅನೇಕ ಸವಾಲುಗಳನ್ನು ದಿಟ್ಟವಾಗಿ ನಿಭಾಯಿಸಿ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿದ ಧೀಮಂತ ನಾಯಕ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಎಸ್‌‍.ಎಂ. ಕೃಷ್ಣ ಒಬ್ಬ ಅಪರೂಪದ ರಾಜಕಾರಣಿ, ವಾಗಿ. ಬೆಂಗಳೂರಿನ ಅಭಿವೃದ್ಧಿ, ಐಟಿ-ಬಿಟಿ ಉದ್ಯಮದ ಉನ್ನತಿ, ಉದ್ಯೋಗಾವಕಾಶಗಳ ಸೃಷ್ಟಿಗೆ ಅವರ ಕೊಡುಗೆ ಅಪಾರ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ.

*ಸುಶಿಕ್ಷಿತರೂ, ಸಜ್ಜನರೂ ಆಗಿದ್ದ ಎಸ್‌‍.ಎಂ.ಕೃಷ್ಣ : ಆದಿಚುಂಚನಗಿರಿ ಶ್ರೀಗಳ ಸಂತಾಪ
ಬೆಂಗಳೂರು,ಡಿ.10- ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಎಸ್‌‍.ಎಂ.ಕೃಷ್ಣ ಅವರು ಭೌತಿಕವಾಗಿ ಇನ್ನಿಲ್ಲವಾಗಿರುವುದು ಅತ್ಯಂತ ದುಃಖದ ವಿಷಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಂತಾಪ ಸೂಚಿಸಿದ್ದಾರೆ.

ಸುಶಿಕ್ಷಿತರೂ, ಸಜ್ಜನರೂ ಆಗಿದ್ದ ಎಸ್‌‍.ಎಂ.ಕೃಷ್ಣ ಅವರು ಅಪರಿಮಿತ ಸೇವೆಯ ಮೂಲಕ ಜನಪ್ರಿಯ ನಾಯಕ ಎನಿಸಿದ್ದರು. ಸುಮಾರು ಆರು ದಶಕಗಳಷ್ಟು ಸುದೀರ್ಘ ಕಾಲ ಸಾರ್ವಜನಿಕ ಕ್ಷೇತ್ರದಲ್ಲಿ ಪ್ರಾಮಾಣಿಕ, ದಕ್ಷ ಆಡಳಿತಗಾರರೆನಿಸಿ ತಮ ಸಾರ್ಥಕ ಸೇವೆಯಿಂದ ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿದ್ದರು ಎಂದು ಸರಿಸಿದ್ದಾರೆ.

ತಮ ಅಧಿಕಾರಾವಧಿಯಲ್ಲಿ ತಾವು ನಂಬಿದ ತತಾ್ತ್ವದರ್ಶಗಳಿಗೆ, ಮೌಲ್ಯಗಳಿಗೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸಿದ್ದಲ್ಲದೆ, ನಿರ್ವಹಿಸಿದ ಎಲ್ಲಾ ಹುದ್ದೆಗಳಿಗೆ ಮೆರುಗನ್ನೂ ತಂದಿದ್ದರು. ಜನಪ್ರತಿನಿಧಿಯಾದವರು ತಮ ಸಾರ್ವಜನಿಕ ಬದುಕಿನಲ್ಲಿ ಹೇಗಿರಬೇಕೆಂಬುದಕ್ಕೆ ಎಸ್‌‍.ಎಂ.ಕೃಷ್ಣ ಅವರು ಮಾದರಿಯಾಗಿದ್ದರು.

ಅಮೆರಿಕದ ಟೆಕ್ಸಾಸ್‌‍ ರಾಜ್ಯದ ಸದರನ್‌ ಮೆಥಡಿಸ್‌‍ ವಿವಿಯಲ್ಲಿ ಅಂತಾರಾಷ್ಟ್ರೀಯ ಕಾನೂನು ಬಗ್ಗೆ ಉನ್ನತ ಶಿಕ್ಷಣ ಪಡೆದು ವಾಷಿಂಗ್ಟನ್‌ನಲ್ಲಿರುವ ಜಾರ್ಜ್‌ ವಾಷಿಂಗ್ಟನ್‌ ವಿವಿಯಲ್ಲಿ ಪ್ರತಿಷ್ಠಿತ ಫುಲ್‌ಬ್ರೈಟ್‌ ವಿದ್ಯಾರ್ಥಿವೇತನ ಪಡೆದುಕೊಂಡಿದ್ದ ಪ್ರತಿಭಾವಂತರು. ತಾವು ಪಡೆದ ಶಿಕ್ಷಣ, ಸಂಗೀತ, ಕ್ರೀಡೆ, ಸಾಹಿತ್ಯ ಮುಂತಾದ ಸಂಸ್ಕಾರಯುತ ಅಭಿರುಚಿಗಳಿಂದಾಗಿ ಉತ್ತಮ ಸಂಸದೀಯ ಪಟುಗಳೆಂದು ಖ್ಯಾತರಾಗಿದ್ದರು.

ಕರ್ನಾಟಕ ವಿಧಾನಸಭೆ, ವಿಧಾನ ಪರಿಷತ್ತು, ರಾಜ್ಯಸಭೆ ಮತ್ತು ಲೋಕಸಭೆಯ ಸದಸ್ಯರಾಗಿ, ರಾಜ್ಯ ಮತ್ತು ಕೇಂದ್ರದ ಸಚಿವರಾಗಿ, ವಿಧಾನಸಭೆಯ ಅಧ್ಯಕ್ಷರಾಗಿ, ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ ಅವರು ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಸಲ್ಲಿಸಿರುವ ಪ್ರಾಮಾಣಿಕ ಸೇವೆ ಎಂದಿಗೂ ಅವಿಸರಣೀಯ.

ದೂರದೃಷ್ಟಿಯನ್ನುಳ್ಳ ನಾಯಕರೆನಿಸಿದ್ದ ಎಸ್‌‍.ಎಂ.ಕೃಷ್ಣರವರು ರಾಜ್ಯದ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಐಟಿಬಿಟಿಗೆ ಭದ್ರ ಬುನಾದಿ ಹಾಕಿ ಬೆಂಗಳೂರಿಗೆ ವಿಶ್ವಮನ್ನಣೆ ದೊರಕುವಂತೆ ಮಾಡಿದರು ಎಂದು ಶ್ರೀಗಳು ನೆನಪಿಸಿಕೊಂಡರು. ತನೂಲಕ ಕರ್ನಾಟಕದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ ಎಸ್‌‍. ಎಂ. ಕೃಷ್ಣರವರು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಸಿಲಿಕಾನ್‌ವ್ಯಾಲಿ ಎಂದು ಖ್ಯಾತಿ ಗಳಿಸಲು ಕಾರಣಕರ್ತರಾದರು. ಎಸ.ಎಂ.ಕೃಷ್ಣ ಅವರು ರಾಷ್ಟ್ರದ ಅಭಿವೃದ್ಧಿಗೆ ನೀಡಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಶ್ರೀಗಳು ನುಡಿದರು.

ನಮ ಪರಮಪೂಜ್ಯ ಗುರುಗಳಾದ ಪ್ರಾತಃಸರಣೀಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿರವರ ಸೇವಾಕೈಂಕರ್ಯಕ್ಕೆ ಮಾರು ಹೋಗಿದ್ದ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಗುರು ದೇವತೆಗಳಲ್ಲಿ ಅಪಾರ ಶ್ರದ್ದಾಭಕ್ತಿ ಹೊಂದಿದ್ದರು. ನಮ ಶ್ರೀ ಮಠವು ಕೈಗೊಳ್ಳುವ ಲೋಕಸೇವಾ ಕೈಂಕರ್ಯಗಳಿಗೆ ತಮ ಸಲಹೆ ಸೂಚನೆಗಳನ್ನು ನೀಡುವುದರ ಜೊತೆಗೆ ಶ್ರೀ ಮಠವು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಪ್ರೋತ್ಸಾಹವನ್ನು ನೀಡುತ್ತಿದ್ದರು ಎಂದು ಗುಣಗಾನ ಮಾಡಿದರು.

ತಮ ಅವಿಸರಣೀಯ ಸೇವೆ, ಸಾಧನೆಯ ಮೂಲಕ ಇಳೆಯ ಮೇಲಿನ ತಮ ಬದುಕನ್ನು ಸಾರ್ಥಕಪಡಿಸಿಕೊಂಡಿದ್ದಾರೆ. ಕೃಷ್ಣರವರು ತಮ ಭೌತಿಕ ದೇಹವನ್ನು ತೊರೆದಿರಬಹುದು, ಆದರೆ ಸಾಮಾಜಿಕ ಕ್ಷೇತ್ರದಲ್ಲಿ ಆದರ್ಶದ ಪಥವೊಂದನ್ನು ನಿರ್ಮಿಸಿ ಹೋಗಿದ್ದಾರೆ. ಯುವ ಜನಾಂಗ ಆ ಆದರ್ಶದ ಪಥದಲ್ಲಿ ಮುನ್ನಡೆಯುವಂತಾಗಲಿ. ಕೃಷ್ಣರವರಂಥ ಅಪ್ರತಿಮ ರಾಜಕೀಯ ಮುತ್ಸದ್ದಿ ಇನ್ನಿಲ್ಲವಾದುದರಿಂದ ಇಡೀ ದೇಶಕ್ಕೆ ಭರಿಸಲಾಗದ ನಷ್ಟವುಂಟಾಗಿದೆ ಎಂದು ದುಃಖತಪ್ತರಾದರು.ಭಗವಂತನು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ವೃಂದಕ್ಕೆ ದುಃಖ ಭರಿಸುವ ಶಕ್ತಿಯನ್ನು, ಅವರ ಆತಕ್ಕೆ ಚಿರಶಾಂತಿ ನೀಡಲೆಂದು ಆಶಿಸುತ್ತೇವೆ ಎಂದು ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಸ್‌‍.ಎಂ.ಕೃಷ್ಣ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕಸಾಗರದಲ್ಲಿ ಮುಳುಗಿದ್ದು, ಎಲ್ಲರಿಗೂ ದುಃಖ ಭರಿಸುವ ಶಕ್ತಿ ನೀಡಲಿ. ಅವರ ಆತಕ್ಕೆ ಸದ್ಗತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಕೃಷಿ ಸಚಿವರು ತಿಳಿಸಿದ್ದಾರೆ.

*ಪರಿಶುಭ್ರತೆಯ ರಾಜಕಾರಣದ ಹಿರಿಯ ಕೊಂಡಿ ಕಳಚಿದೆ : ಶ್ರೀ ತರಳಬಾಳು ಜಗದ್ಗುರು ಸಂತಾಪ
ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್‌‍.ಎಂ. ಕೃಷ್ಣ ನಿಧಾನದಿಂದ ನಾಡಿನ ಹಿರಿಯ ರಾಜಕೀಯ ಮುತ್ಸದ್ದಿಗಳ ಪರಂಪರೆಯ ದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನಠದ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಳೆದ 6 ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷ ತುಂಬು ಜೀವನ ನಡೆಸಿ ಇಂದು ಇಹಲೋಕ ತ್ಯಜಿಸಿರುವ ಎಸ್‌‍.ಎಂ.ಕೃಷ್ಣ ಅವರು ಎಂದೂ ಸಂಯಮದ ಗೆರೆ ದಾಟಿದವರಲ್ಲ, ಅವರು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ ತಲೆದೋರಿದ ಕಾವೇರಿ ಚಳುವಳಿ, ಡಾ.ರಾಜ್‌ಕುಮಾರ್‌ ಅಪಹರಣ, ಬರಗಾಲದ ಬಿಸಿ ಇಂತಹ ಕಠಿಣ ಸಂದರ್ಭದಲ್ಲೂ ವಿರೋಧ ಪಕ್ಷದ ಬೋರ್ಗೆರೆಯುವ ಟೀಕೆಟಿಪ್ಪಣಿಗಳನ್ನು ಸಮಚಿತ್ತದಿಂದ ಎದುರಿಸಿ ಸಮಸ್ಯೆಗಳನ್ನು ಪರಿಹರಿಸಿದವರು. ಅವರ ಪ್ರತಿ ಮಾತಿನ ಹಿಂದೆ ಅಧ್ಯಯನ ಶೀಲತೆ ವ್ಯಕ್ತವಾಗುತ್ತಿತ್ತು ಎಂದು ಸರಿಸಿದ್ದಾರೆ.

ಇಂದಿನ ತಲೆಮಾರಿನ ರಾಜಕೀಯ ಧುರೀಣರಿಗೆ ಅವರ ರಾಜಕೀಯ ಜೀವನ ತೆರೆದಿಟ್ಟ ಪುಸ್ತಕವಿದ್ದಂತೆ. ಬೆಂಗಳೂರಿನ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದ ಎಸ್‌‍.ಎಂ.ಕೃಷ್ಣ ಅವರಿಂದಲೇ ಬೆಂಗಳೂರಿಗೆ ವಿಶ್ವಮಟ್ಟದಲ್ಲಿ ಸಿಲಿಕಾನ್‌ ಸಿಟಿ, ಐಟಿ-ಬಿಟಿ ಸಿಟಿ ಎಂಬ ಹೆಸರು ಬಂತು ಎಂದು ಗುಣಗಾನ ಮಾಡಿದ್ದಾರೆ.

ಅರಸೀಕೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ನಿಗದಿಯಾದಗ, ಗುಜಾರಾತ್‌ನಲ್ಲಿ ಭೂಕಂಪದಿಂದ ಅನಾಹುತ ಸಂಭವಿಸಿತ್ತು. ಪರಂಪರೆಯಂತೆ 9 ದಿನಗಳು ನಡೆಯಬೇಕಿದ್ದ ಅರಸೀಕೆರೆ ತರಳಬಾಳು ಹುಣ್ಣಿಮೆಯನ್ನು ಗುಜಾರಾತ್‌ನಲ್ಲಿ ಭೂಕಂಪದ ನೋವಿಗೆ ಮಿಡಿಯುವ ಕಾರ್ಯಕ್ರಮವನ್ನಾಗಿ ರೂಪಿಸಿ ಮಹೋತ್ಸವದ ಕೊನೆಯ ದಿನ ಪಲ್ಲಕ್ಕಿ ಉತ್ಸವವನ್ನು ರದ್ದುಗೊಳಿಸಿ, ನಾವು ಉತ್ಸವದ ಬದಲಾಗಿ ಅರಸೀಕೆರೆಯ ಬೀದಿಗಳಲ್ಲಿ ಸಂಚರಿಸಿ ಹಣ ಸಂಗ್ರಹಿಸಿ ಸಂತ್ರಸ್ತರಿಗೆ ಕಳುಹಿಸಿದಾಗ ಅವರು ಸಹ ಅಂದಿನ ದಿನದ ರಾತ್ರಿ ಕಾರ್ಯಕ್ರಮದಲ್ಲಿ ಅವರು ತಮ ಧರ್ಮ ಪತ್ನಿ ಶ್ರೀ ಪ್ರೇಮಾರವರೊಂದಿಗೆ ಭಾಗವಹಿಸಿ ಮಠದ ಸಾಮಾಜಿಕ ಕಳಕಳಿ ಮೆರೆದಿದ್ದರು. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ನಮ ಸಂಕಲ್ಪದಂತೆ ಹೊನವಳ್ಳಿ ಏತ ನೀರಾವರಿ ಯೋಜನೆ ಅನುಷ್ಠಾನಗೊಳ್ಳಲು ನೆರವಾಗಿದ್ದರು ಎಂದು ನೆನಪಿಸಿಕೊಂಡರು.

ಒಮೆ ಅವರು ಯಾತ್ರೆಯ ಸಂದರ್ಭದಲ್ಲಿ ಮಠಕ್ಕೆ ಆಶೀರ್ವಾದಕ್ಕೆ ಆಗಮಿಸುವುದಾಗಿ ಬಯಕೆ ವ್ಯಕ್ತಪಡಿಸಿದಾಗ ಅದೇ ಸಮಯದಲ್ಲಿ ಪೂರ್ವ ನಿಗದಿಯಂತೆ ನಾವು ವಿದೇಶದಲ್ಲಿರುವುದಾಗಿ ತಿಳಿಸಿದರೂ ಸಹ ಸಾವಿರಾರು ಸಂಖ್ಯೆಯಲ್ಲಿ ಜನರೊಂದಿಗೆ ಆಗಮಿಸಿ ನಮ ಅನುಪಸ್ಥಿತಿಯಲ್ಲಿ ಲಿಂಗೈಕ್ಯ ಗುರುವರ್ಯರ ಗದ್ದುಗೆಗೆ ಆಗಮಿಸಿ ಭಕ್ತಿ ಗೌರವ ಸಮರ್ಪಿಸಿದ್ದು ಅವರು ಮಠದ ಮೇಲೆ ಇಟ್ಟಿದ್ದ ಪೂಜ್ಯ ಭಾವನೆಯನ್ನು ಅನಾವರಣಗೊಳಿಸಿತ್ತು.

ರಾಜಕಾರಣದಲ್ಲಿ ಅತ್ಯಂತ ಶಾಂತ ಸ್ವಭಾವದ, ಸಜ್ಜನ, ಕೃಷ್ಣ ಪರಿಶುಭ್ರತೆಗೆ ಮಾದರಿಯಾದವರು. ವಿಶ್ವಬಂಧು ಮರುಳಸಿದ್ಧ, ಬಸವಾದಿ ಶರಣರು ,ಭಗವಂತ ಅವರ ಆತಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

*ಗೃಹ ಸಚಿವ ಪರಮೇಶ್ವರ ತೀವ್ರ ಸಂತಾಪ :
ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಎಸ್‌‍.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ.

ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ನನಗೆ ಅನುಕರಣೀಯ.ಮೃತರ ಆತ್ಮಕ್ಕೆ ಚಿರ ಶಾಂತಿ ಕೊರುತ್ತೇನೆ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಆಪ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ.

*ಸಿಲಿಕಾನ್‌ ವ್ಯಾಲಿ ಎಂಬ ಶ್ರೇಯಸ್ಸು ದೊರೆಯುವಂತೆ ಮಾಡಿದ ನಾಡು ಕಂಡ ಧೀಮಂತ ರಾಜಕಾರಣಿ :
ಕರ್ನಾಟಕದ ಮುತ್ಸದ್ಧಿ ರಾಜಕಾರಣಿ, ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಎಂಬ ಶ್ರೇಯಸ್ಸು ದೊರೆಯುವಂತೆ ಮಾಡಿದ ನಾಡು ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳಾದ ಎಸ್‌‍.ಎಂ.ಕೃಷ್ಣ ಅವರ ನಿಧನ ಸುದ್ದಿ ತಿಳಿದು ಅತೀವ ದುಃಖವಾಯಿತು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಸಚಿವರು, ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಹಾಗೂ ಸಮರ್ಥವಾಗಿ ನಿಭಾಯಿಸಿದ ಎಸ್‌‍.ಎಂ. ಕೃಷ್ಣ ಅವರು, ಕರ್ನಾಟಕದಲ್ಲಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ನೀಡಿರುವ ಕೊಡುಗೆ ಸದಾ ಸರಣೀಯ ಎಂದು ಸಚಿವರು ತಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲವಾರು ಸಂದರ್ಭದಲ್ಲಿ ಶ್ರೀಯುತರ ಮಾರ್ಗದರ್ಶನವನ್ನು ನಾನು ಪಡೆದಿದ್ದೇನೆ ಎಂದು ಸಚಿವರು ಸರಿಸಿದರು.ಕೃಷ್ಣ ಅವರು ಶಾಸ್ತ್ರೀಯ ಸಂಗೀತಾಸ್ತಕರಾಗಿದ್ದರು.

ಪ್ರತಿ ವರ್ಷ ಚಾಮರಾಜಪೇಟೆಯಲ್ಲಿ ನಡೆಯುತ್ತಿದ್ದ ಸಂಗೀತೋತ್ಸವಕ್ಕೆ ದಂಪತಿ ಸಮೇತ ಬಂದು ಸಂಗೀತ ಆಲಿಸುತ್ತಿದ್ದರು. ಲಾನ್‌ ಟೆನಿಸ್‌‍ ಬಗ್ಗೆ ವಿಶೇಷ ವ್‌ಯಾಮೋಹ ಹೊಂದಿದ್ದ ಕೃಷ್ಣ ಅವರು ಬ್ಯಾಡಿಂಟನ್‌ ಪ್ರಿಯರಾಗಿದ್ದು, ಪ್ರತಿ ದಿನವೂ ಆಡುತ್ತಿದ್ದನ್ನು ಕಂಡಿದ್ದೇವೆ.ಎಸ್‌‍.ಎಂ.ಕೃಷ್ಣ ಅವರ ನಿಧನದಿಂದ ವೈಯಕ್ತಿಕವಾಗಿ ಅಪಾರ ದುಃಖವಾಗಿದೆ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗದವರಿಗೆ, ಬಂಧು-ಬಳಗದವರಿಗೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಬಿ.ವೈ.ವಿಜಯೇಂದ್ರ ಕಂಬನಿ :
ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರ ನಿಧನದಿಂದ ಬಿಜೆಪಿ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಎಸ್‌‍.ಎಂ.ಕೃಷ್ಣ ಅವರು ಹಲವು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಇದ್ದವರು. ಬೆಂಗಳೂರನ್ನು ಐ.ಟಿ-ಬಿ.ಟಿ ಹಬ್‌ ಆಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಅವರಿಗೆ ಪದ ವಿಭೂಷಣ ಪ್ರಶಸ್ತಿಯನ್ನೂ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.

ಹಿರಿಯರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತಕ್ಕೆ ಚಿರಶಾಂತಿ ದೊರೆಯಲಿ ಎಂದು ವಿಜಯೇಂದ್ರ ಪ್ರಾರ್ಥಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಶೋಕ :
ಮಾಜಿ ಮುಖ್ಯಮಂತ್ರಿ ಎಸ್‌‍.ಎಂ.ಕೃಷ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷೀ ಹೆಬ್ಬಾಳ್ಕರ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದ ಸಚಿವರಾಗಿ, ರಾಜ್ಯಪಾಲರಾಗಿ ಅವರು ಈ ನಾಡಿಗೆ ಸಲ್ಲಿಸಿದ ಸೇವೆ ಅನುಪಮವಾಗಿದೆ. ನನ್ನ ರಾಜಕೀಯ ಜೀವನದಲ್ಲಿ ಅವರು ಗುರುವಿನಂತೆ ಇದ್ದು ಮಾರ್ಗದರ್ಶನ ನೀಡುತ್ತಿದ್ದರು. ಅವರ ಅವಧಿಯಲ್ಲಿ ಐಟಿ, ಬಿಟಿ ಕ್ಷೇತ್ರದಲ್ಲಿನ ಸಾಧನೆಯಿಂದಾಗಿ ಕರ್ನಾಟಕ ವಿಶ್ವದಲ್ಲೇ ಹೆಸರಾಗುವಂತೆ ಮಾಡಿದ್ದರು ಎಂದು ಸಚಿವರು ಸರಿಸಿದ್ದಾರೆ.

ಅಜಾತಶತ್ರುಗಳಾಗಿದ್ದ ಅವರು, ಕಿರಿಯ ರಾಜಕಾರಣಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ಅವರ ನಡೆ-ನುಡಿ, ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಲಕ್ಷೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

RELATED ARTICLES

Latest News