ಮದ್ದೂರು,ಡಿ.11- ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿಂದು ವರ್ತಕರು ಅಂಗಡಿಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಗೌರವ ಸಲ್ಲಿಸಿದ್ದಾರೆ.
ಪ್ರಗತಿಪರ ಸಂಘಟನೆಗಳು, ರೈತ ಮುಖಂಡರು, ವರ್ತಕರ ಸಂಘ ಸೇರಿದಂತೆ ಎಲ್ಲಾ ಸಂಘಟನೆಗಳು ಪಕ್ಷಾತೀತವಾಗಿ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಸಹ ಇಂದು ಬೆಳಗ್ಗೆಯೇ ಅಂಗಡಿ, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್‌ಗಳ ಬಾಗಿಲನ್ನು ಬಂದ್ ಮಾಡಿ ಅಂತಿಮ ನಮನ ಸಲ್ಲಿಸುವಂತೆ ಕರೆ ನೀಡಲಾಗಿತ್ತು.
ಅದರಂತೆ ಎಲ್ಲರೂ ಸಹ ಎಸ್.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ. ನಮ ತಾಲ್ಲೂಕಿನ ಸೋಮನಹಳ್ಳಿಯ ಕೃಷ್ಣ ಅವರು ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.
ಅವರ ಅಧಿಕಾರ ಅವಧಿಯಲ್ಲಿ ಕರುನಾಡಿಗೆ ಸಲ್ಲಿಸಿದ ಸೇವೆ ಅನನ್ಯ. ನಾವು ಇಂದು ಒಂದು ದಿನ ಎಲ್ಲರೂ ಸಹ ಅವರಿಗೆ ಗೌರವ ಸಲ್ಲಿಸುವುದು ನಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ನಾವು ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದೇವೆ ಎಂದು ವರ್ತಕರು ತಿಳಿಸಿದ್ದಾರೆ.
ದಿನಬಳಕೆಯ ವಸ್ತುಗಳನ್ನು ಹೊರತುಪಡಿಸಿದರೆ ಉಳಿದೆಲ್ಲವು ಬಂದ್ ಮಾಡಲಾಗಿತ್ತು. ನಗರದ ತುಂಬೆಲ್ಲ ಎಸ್.ಎಂ.ಕೃಷ್ಣ ಅವರ ಭಾವಚಿತ್ರವುಳ್ಳ ಫ್ಲೆಕ್‌್ಸ ಬ್ಯಾನರ್‌ಗಳನ್ನು ಹಾಕಿಕೊಂಡು ಮಾಜಿ ಮುಖ್ಯಮಂತ್ರಿಗಳಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.