ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ : ಬಿಎಸ್‌ವೈ ವಿರುದ್ಧ ಡಿವಿಎಸ್ ಪರೋಕ್ಷ ವಾಗ್ದಾಳಿ
ಬೆಂಗಳೂರು, ಮಾ.21-ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪಕ್ಷದಲ್ಲಿದ್ದುಕೊಂಡೇ ಶುದ್ದೀಕರಣ ಕೆಲಸ ಮಾಡುವುದಾಗಿ ಸ್ವಪಕ್ಷೀಯರ ವಿರುದ್ಧವೇ ಗುಡುಗಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿತ್ತು. ಹೀಗಾಗಿ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಇದೀಗ ಎಲ್ಲಾ ವದಂತಿಗಳಿಗೆ ತೆರೆ ಎಳೆದಿರುವ ಖುದ್ದು ಡಿವಿಎಸ್, ನನಗೆ ಕಾಂಗ್ರೆಸ್ ಸೇರುವಂತೆ ಆ ಪಕ್ಷದ ಪ್ರಮುಖರು ಆಹ್ವಾನ ನೀಡಿದ್ದು ನಿಜ. ಆದರೆ ನಾನು ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವುದಕ್ಕೆ ನಿಜವಾಗಿಯೂ ಬೇಸರವಾಗಿದೆ. ಟಿಕೆಟ್ ಕೈ ತಪ್ಪಿಸಿದವರು ಯಾರು ಎಂಬುದು ನನಗೂ ಗೊತ್ತು. ನಿಮಗೂ ಗೊತ್ತು ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವಿರುದ್ಧ ವಾಗ್ದಾಳಿ ನಡೆಸಿದರು. ನಾನು … Continue reading ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ : ಬಿಎಸ್‌ವೈ ವಿರುದ್ಧ ಡಿವಿಎಸ್ ಪರೋಕ್ಷ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed