ಸದಾಶಿವ ಆಯೋಗದ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆ

Social Share

ಬೆಂಗಳೂರು,ಜ.10- ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಅರವಿಂದ ಲಿಂಬಾವಳಿ ಎಚ್ಚರಿಸಿದ್ದಾರೆ.

ಸದಾಶಿವ ಆಯೋಗದ ವರದಿಯನ್ನು ವಿರೋಧಿಸಿ ದಮನಿತ ಸಮುದಾಯಗಳು ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಅವೈಜ್ಞಾನಿಕವಾಗಿರುವ ಈ ವರದಿಯನ್ನು ರಾಜ್ಯ ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು. ಒಂದು ವೇಳೆ ಇದನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ಹೊಣೆಯಾಗ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವರದಿಯಲ್ಲಿ ಸಾಕಷ್ಟು ಅವೈಜ್ಞಾನಿಕವಾದ ಅಂಶಗಳಿವೆ. ನಿವೃತ್ತ ನ್ಯಾಯಮೂರ್ತಿ ಸದಾಶಿವ ಅವರು ವೈಜ್ಞಾನಿಕವಾಗಿ ಅಧ್ಯಯನ ನಡೆಸದೆ ಆತುರಾತುರವಾಗಿ ಅಂದು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಈ ವರದಿ ಅನುಷ್ಠಾನವಾದರೆ ಪರಿಶಿಷ್ಟ ಪಂಗಡದಲ್ಲಿರುವ ದಮನಿತ ಸಮುದಾಯಕ್ಕೆ ಸಾಕಷ್ಟು ಅನ್ಯಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಲಿಂಬಾವಳಿ, ನಾವು ಅಧಿಕಾರಕ್ಕೆ ಬಂದರೆ ವರದಿಯನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳುತ್ತಿರುವುದು ಅತ್ಯಂತ ಹಾಸ್ಯಾಸ್ಪದ. ಅಧಿಕಾರದಲ್ಲಿದ್ದಾಗಲೇ ವರದಿಯ ಕಡೆ ಕಣ್ಣೆತ್ತಿ ನೋಡಲಿಲ್ಲ. ಈಗ ನಮ್ಮ ಸಮುದಾಯಕ್ಕೆ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ವಿಧಾನಸೌಧದೆದುರು ಬಸವಣ್ಣ, ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಜ.13 ರಂದು ಶಂಕುಸ್ಥಾಪನೆ

ವರದಿ ಅನುಷ್ಠಾನವಾದರೆ ದಲಿತ ಸಮುದಾಯದಲ್ಲಿರುವ ಭೋವಿ, ಬಂಜ ರ, ಕೊರಚ, ಕೊರಮ, ಚಲವಾದಿ, ಅಲೆಮಾರಿ ಮತ್ತಿತರ ದಮನಿತ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಸಾರ್ವಜನಿಕವಾಗಿ ಚರ್ಚಿಸದೆ, ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರ ಜೊತೆಯೂ ಮಾತುಕತೆ ನಡೆಸದೆ ಇದನ್ನು ಹೇಗೆ ಅನುಷ್ಠಾನ ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.

ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಸದಾಶಿವ ಆಯೋಗದ ವರದಿ ಜಾರಿಯಾದರೆ ನಮ್ಮ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಲಿದೆ. ಸರ್ಕಾರ ತಕ್ಷಣವೇ ಸಚಿವ ಸಂಪುಟದಲ್ಲಿ ಚರ್ಚಿಸಿ ಇದನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದರು.

ಕೆಲವೇ ಸಮುದಾಯಗಳಿಗೆ ಅನುಕೂಲ ವಾಗಲಿದ್ದು, ಅತ್ಯಂತ ಹಿಂದುಳಿದ ಜಾತಿಗಳಿಗೆ ಇದು ಅಕ್ಷರಶಃ ಮರಣಶಾಸನವಾಗಲಿದೆ. ಸಚಿವ ಸಂಪುಟ ಉಪಸಮಿತಿಯನ್ನು ವಿಸರ್ಜಿಸಬೇಕು. ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲೇಬಾರದು. ಒಂದು ವೇಳೆ ಸಮುದಾಯದ ಹಿತಾಸಕ್ತಿಯನ್ನು ಕಡೆಗಣಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೆ ಮುಂದೆ ಆಗುವ ಎಲ್ಲಾ ಅನಾಹುತಗಳಿಗೂ ಸರ್ಕಾರ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸ್ವಾಮೀಜಿ ಗುಡುಗಿದರು.

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವು..!

ಇದಕ್ಕೂ ಮುನ್ನ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾ ನಿರತರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಭಾರೀ ಜನಸ್ತೋಮ ನೆರೆದಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಪ್ರತಿಭಟನೆಯಲ್ಲಿ ಕರ್ನಾಟಕ ಚನ್ನದಾಸರ್, ಹೊಲೆಯದಾಸರ್, ಮಾಲದಾಸರ್ ಸಂಘ ಸೇರಿದಂತೆ ಲಕ್ಷಾಂತರ ಜನರು ಭಾಗವಹಿಸಿದ್ದರು.

Sadashiva commission report, against, Massive, protest, Bengaluru,

Articles You Might Like

Share This Article