ನವದೆಹಲಿ,ಫೆ.25- 1984ರ ಸಿಖ್ ವಿರೋಧಿ ದಂಗೆಯಲ್ಲಿ ಆರೋಪಿಯಾಗಿದ್ದ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ದೆಹಲಿಯ ರೋಜ್ ಅವಿನ್ಯೂ ರಸ್ತೆಯಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕಾವೇರಿ ಬವೇಜ ಅವರು ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿ ಜೀವಾವಧಿ ಶಿಕ್ಷೆ ವಿಧಿಸಿದರು.
ಸಿಬಿಐ ವಶದಲ್ಲಿದ್ದ ಸಜ್ಜನ್‌ಕುಮಾರ್ ಅವರನ್ನು ತಕ್ಷಣವೇ ತಿಹಾರ್ ಜೈಲಿಗೆ ಕರೆದೊಯ್ಯಲಾಯಿತು. 1984 ನವೆಂಬರ್ 1ರಂದು ದೆಹಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ತಂದೆ ಮತ್ತು ಮಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಜ್ಜನ್‌ಕುಮಾರ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು.
ಸುಮಾರು ದಶಕಗಳ ಕಾಲ ನಡೆದ ಸುದೀರ್ಘ ಕಾಲ ವಾದವನ್ನು ಆಲಿಸಿದ್ದ ನ್ಯಾಯಾಲಯ ಅಂತಿಮವಾಗಿ ಈ ಪ್ರಕರಣದಲ್ಲಿ ಸಜ್ಜನ್‌ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತು. ಸಿಬಿಐ ಪರ ವಾದ ಮಂಡಿಸಿದ್ದ ವಕೀಲರು ಸಜ್ಜನ್‌ಕುಮಾರ್‌ಗೆ ಮರಣದಂಡನೆ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದರು. ಅಂತಿಮವಾಗಿ ನ್ಯಾಯಾಲಯವು ಸಜ್ಜನ್‌ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.