Monday, January 6, 2025
Homeರಾಜ್ಯಆರ್ಥಿಕ ಇಲಾಖೆ ಅನುಮೋದನೆ ಬಳಿಕ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ

ಆರ್ಥಿಕ ಇಲಾಖೆ ಅನುಮೋದನೆ ಬಳಿಕ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ

Salary revision of guest lecturers after approval from Finance Department

ಬೆಳಗಾವಿ,ಡಿ.9- ಆರ್ಥಿಕ ಇಲಾಖೆ ಅನುಮೋದನೆ ಪಡೆದುಕೊಂಡ ನಂತರ ಅತಿಥಿ ಉಪನ್ಯಾಸಕರ ವೇತನವನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ವಿಧಾನಪರಿಷ್‌ನಲ್ಲಿ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಧನಂಜಯ್ಯ ಸರ್ಜಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2022ರಲ್ಲಿ ವೇತನ ಪರಿಷ್ಕರಣೆ ಮಾಡಲಾಗಿತ್ತು. ಈ ಹಿಂದೆ ಪರಿಷ್ಕರಣೆ ಮಾಡುವಂತೆ ಆರ್ಥಿಕ ಇಲಾಖೆಗೆ ಕಳುಹಿಸಿದಾಗ ಅದನ್ನು ವಾಪಸ್‌‍ ಕಳುಹಿಸಿದ್ದಾರೆ ಎಂದರು.

ಪ್ರಾಥಮಿಕ ಶಾಲೆಯಲ್ಲಿ 35 ಸಾವಿರ(ಹತ್ತು ಸಾವಿರ ವೇತನ), ಪ್ರೌಢಶಾಲೆಯಲ್ಲಿ 8968 ಶಿಕ್ಷಕರು( ಹತ್ತು ಐದನೂರು ಸಾವಿರ ವೇತನ), ಪದವಿ ಪೂರ್ವ ಕಾಲೇಜುಗಳಲ್ಲಿ 4,689 (12 ಸಾವಿರ ವೇತನ) ಗೌರವ ವೇತನ ಜೊತೆಗೆ ಬೇರೆ ಯಾವುದೇ ಸಂಭಾವನೆ ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯ ಧನಂಜಯ್ಯ ಸರ್ಜಿ ಅವರು, ಒಬ್ಬ ಸೆಕ್ಯುರಿಟಿ ಗಾರ್ಡ್‌ಗೆ ನೀಡುವಷ್ಟು ಗೌರವ ಸಂಭಾವನೆ ಕೊಡುವುದಿಲ್ಲ. ಹೀಗಾದರೆ ಅವರು ಕುಟುಂಬ ನಿರ್ವಹಣೆ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು. ಎರಡು ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ ಎಂಬುದು ನನ್ನ ಗಮನದಲ್ಲಿದೆ. ಪರಿಷ್ಕರಣೆ ಮಾಡಲು ಮನವಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

RELATED ARTICLES

Latest News