ಮುಂಬೈ, ಏ.14 – ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೆ ಜೀವ ಬೆದರಿಕೆ ಬಂದಿದೆ.
ಮುಂಬೈನ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಮತ್ತೊಂದು ಕೊಲೆ ಬೆದರಿಕೆ ಬಂದಿರುವುದನ್ನು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಖಾನ್ ಅವರ ಮನೆಯಾದ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ನುಗ್ಗಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವ ಮೂಲಕ ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಸಂದೇಶದಲ್ಲಿ ಎಚ್ಚರಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳ ವಿರುದ್ಧ ವರ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಂಕಿತನನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆಯೂ ಹಲವಾರು ಬಾರಿ ಸಲ್ಮಾನ್ ಖಾನ್ ಗೆ ಬೆದರಿಕೆ ಕರೆಗಳು ಬಂದಿದ್ದವು. ಅದರಲ್ಲೂ ಕೃಷ್ಣ ಮೃಗ ಬೇಟೆಯಾಡಿದ ಆರೋಪಕ್ಕೆ ಗುರಿಯಾಗಿದ್ದ ಸಲ್ಲು ಅವರನ್ನು ಕೊಲ್ಲುವುದಾಗಿ ಬಿಟ್ಟೋಯ್ ಗ್ಯಾಂಗ್ ಬೆದರಿಕೆ ಹಾಕುತ್ತಲೆ ಬರುತ್ತಿತ್ತು.
ಇತ್ತೀಚೆಗೆ ತಮಗೆ ಬರುತ್ತಿರುವ ಕೊಲೆ ಬೆದರಿಕೆಗಳ ಬಗ್ಗೆ ಮಾತನಾಡಿದ್ದ ಸಲ್ಲೂ ಭಾಯ್ ನನ್ನ ನಾವನ್ನು ನಿರ್ಧರಿಸುವುದು ಆ ದೇವರು ಅಲ್ಲಿಯವರೆಗೂ ಯಾರು ನನ್ನನ್ನು ಏನು ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಇದೀಗ ಅವರ ನಟನೆಯ ಸಿಕಂದರ್ ಚಿತ್ರ ಬಾಕ್ಸಾಫಿಸ್‌ನಲ್ಲಿ ಸದ್ದು ಮಾಡುತ್ತಿದ್ದಂತೆ ಅವರಿಗೆ ಮತ್ತೊಮ್ಮೆ ಕೊಲೆ ಬೆದರಿಕೆ ಹಾಕಲಾಗಿದೆ.