ಜೈಲಿನಿಂದ ಅಜಂ ಖಾನ್ ಬಿಡುಗಡೆ

Spread the love

ಸೀತಾಪುರ (ಉತ್ತರ ಪ್ರದೇಶ), ಮೇ 20 – ವಂಚನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರನ್ನು ಬೆಳಿಗ್ಗೆ ಉತ್ತರ ಪ್ರದೇಶದ ಸೀತಾಪುರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಖಾನ್ ಅವರ ಪುತ್ರ ಮತ್ತು ಶಾಸಕ ಅಬ್ದುಲ್ಲಾ ಅಜಂ, ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ನಾಯಕ ಶಿವಪಾಲ್ ಸಿಂಗ್ ಯಾದವ್ ಮತ್ತು ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಜೈಲಿನಿಂದ ಬಿಡುಗಡೆ ಮಾಡಿದ ನಂತರ ಅವರನ್ನು ಸ್ವಾಗತಿಸಿದರು.

ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಬಿಡುಗಡೆ ಆದೇಶ ಜೈಲು ಅಧಿಕಾರಿಗಳ ಕೈಗೆ ತಲುಪಿದ್ದು , ಎಲ್ಲಾ ಪ್ರಕ್ರಿಯೆಗಳ ನಂತರ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಅಜಂ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ. ಭೂಕಬಳಿಕೆ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 27 ತಿಂಗಳಿಂದ ಅಜಂ ಖಾನ್ ಜೈಲಿನಲ್ಲಿದ್ದರು.

Facebook Comments