ಸಂಭಾಲ್,ಮಾ.18- ಅಕ್ರಮವಾಗಿ ನಿರ್ಮಿಸಲಾಗಿದ್ದ ಕೋಲ್ಡ್ ಸ್ಟೋರೇಜ್ ಕುಸಿತು 14 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲೀಕರನ್ನು ಪೊಲೀಸರು ಬಂಧಿಸಿದ್ದಾರೆ. ಚಂಡೌಸಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ರಸ್ತೆಯಲ್ಲಿದ್ದ ಕೋಲ್ಡ್‍ಸ್ಟೋರೆಜ್ ಗುರುವಾರ ಕುಸಿದಿತ್ತು, ಅದರಡಿ ಸಿಲುಕಿದ್ದ 24 ಜನರನ್ನು ಹೊರತೆಗೆಯಲಾಗಿದೆ. ಅವರಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ.
ಕೋಲ್ಡ್ ಸ್ಟೋರೇಜ್ ಮಾಲೀಕರಾದ ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಅವರನ್ನು ಉತ್ತರಾಖಾಂಡದ ಹಲ್ದ್ವಾನಿಯಿಂದ ಬಂಧಿಸಲಾಗಿದೆ ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೀಶ್ ಬನ್ಸಾಲ್ ತಿಳಿಸಿದ್ದಾರೆ.
ಸಂಕಷ್ಟದಲ್ಲಿರುವ ಶ್ರೀಲಂಕಾ ನೆರವಿಗೆ ಭಾರತ ಬದ್ಧ ; ಜೈಶಂಕರ್
ಕಟ್ಟಡ ಕುಸಿತದ ಕಾರಣಗಳನ್ನು ತನಿಖೆ ಮಾಡಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವಿಭಾಗೀಯ ಆಯುಕ್ತರ ನೇತೃತ್ವದಲ್ಲಿ ಮೊರಾದಾಬಾದ್‍ನ ಡಿಐಜಿಯನ್ನು ಒಳಗೊಂಡ ವಿಶೇಷ ಸಮಿತಿಯನ್ನು ರಚಿಸಿದ್ದಾರೆ.
ಪೊಲೀಸರು ಮಾಲೀಕರಾದ ಅಂಕುರ್ ಮತ್ತು ರೋಹಿತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ ಅಗತ್ಯ ಅನುಮತಿ ಪಡೆಯದೆ ಮೂರು ತಿಂಗಳ ಹಿಂದೆ ಕುಸಿದ ಮೇಲ್ಛಾವಣಿಯನ್ನು ನಿರ್ಮಿಸಲಾಗಿದೆ. ಜೊತೆಗೆ ಕೋಲ್ಡ್ ಸ್ಟೋರೇಜ್‍ನಲ್ಲಿ ಸಾಮಥ್ರ್ಯ ಮೀತಿ ಆಲೂಗಡ್ಡೆ ಸಂಗ್ರಹಿಸಲಾಗಿತ್ತು ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿ ವಿದೇಶಿ ಪ್ರಜೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ. ತೀವ್ರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಿದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುತ್ತಿದೆ.
Sambhal, cold, storage, collapse, Owners, arrested, Uttarakhand,