ಮುಂಬೈ,ಫೆ.10- ಡ್ರಗ್ಸ್ ಪ್ರಕರಣದಲ್ಲಿ ಪುತ್ರನನ್ನು ರಕ್ಷಿಸಲು ಸೂಪರ್ ಸ್ಟಾರ್ ಶಾರುಖ್ ಖಾನ್ ಕುಟುಂಬದಿಂದ 25 ಕೋಟಿ ರೂ.ಲಂಚದ ಬೇಡಿಕೆಯ ಆರೋಪದ ಮೇಲೆ ಸಿಬಿಐ ಎಫ್‍ಐಆರ್‍ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂಬೈ ಎನ್‍ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕೇಂದ್ರೀಯ ಸಂಸ್ಥೆ ಪ್ರಕರಣ ದಾಖಲಿಸಿದೆ.
ಕಸ್ಟಮ್ಸ ಮತ್ತು ಪರೋಕ್ಷ ತೆರಿಗೆ ಕೇಡರ್‍ನ 2008-ಬ್ಯಾಚ್‍ನ ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗಿರುವ ವಾಂಖೆಡೆ ಅವರು ಅಕ್ರಮ ಹಣ ವರ್ಗಾವಣೆ-ವಿರೋಧಿ ಏಜೆನ್ಸಿಯ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.
ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ಲಂಚ ಕೇಳಿದ ಆರೋಪದ ಮೇಲೆ ಕಳೆದ ವರ್ಷ ಮೇ ತಿಂಗಳಲ್ಲಿ ಸಿಬಿಐನಿಂದ ಪ್ರಕರಣ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು.
ಉಗ್ರ ಬೆಂಬಲಿಗರ ಮೇಲೆ ಎನ್‍ಐಎ ರೇಡ್
ಕೇಂದ್ರೀಯ ತನಿಖಾ ದಳದವರು ವಾಂಖೆಡೆ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪಿತೂರಿ (120-ಬಿ ಐಪಿಸಿ), ಮತ್ತು ಸುಲಿಗೆ ಬೆದರಿಕೆ (388 ಐಪಿಸಿ) ಜೊತೆಗೆ ಎನ್‍ಸಿಬಿಯಿಂದ ಬಂದ ದೂರಿನ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ದಾಖಲಿಸಿದೆ. ಒಂದು ವರ್ಷದ ನಂತರ, ಎನ್‍ಸಿಬಿ 14 ಆರೋಪಿಗಳ ವಿರುದ್ಧ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತು ಆದರೆ ಆರ್ಯನ್ ಖಾನ್‍ಗೆ ಕ್ಲೀನ್ ಚಿಟ್ ಸಿಕ್ಕಿತ್ತು.
2021 ರಲ್ಲಿ ಸ್ವತಂತ್ರ ಸಾಕ್ಷಿಯೊಬ್ಬರು ಎನ್‍ಸಿಬಿ ಅಧಿಕಾರಿ ಮತ್ತು ಆರ್ಯನ್ ಖಾನ್ ಅವರನ್ನು ಬಿಟ್ಟುಕೊಡಲು ಸಾಕ್ಷಿ ಗೋಸಾವಿ ಸೇರಿದಂತೆ ಇತರ ವ್ಯಕ್ತಿಗಳಿಂದ 25 ಕೋಟಿಗೆ ಬೇಡಿಕೆಯಿಟ್ಟರು ಎಂದು ಹೇಳಿದಾಗ ಹೆಚ್ಚು ಪ್ರಚಾರಗೊಂಡ ಪ್ರಕರಣವು ಟ್ವಿಸ್ಟ್ ತೆಗೆದುಕೊಂಡಿತ್ತು. ಕೆಲವು ಮಾಜಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ಅಧಿಕಾರಿಗಳಿಗೂ ಸಮನ್ಸ್ ನೀಡಲಾಗಿದೆ.