ಸ್ಯಾಂಡಲ್‍ವುಡ್ ನಿರ್ದೇಶಕ ಮುರಳಿಕೃಷ್ಣ ವಿಧಿವಶ

Social Share

ಬೆಂಗಳೂರು.15-ಕನ್ನಡ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಓ ಮುರಳಿ ಕೃಷ್ಣ(63) ನಿಧನರಾಗಿದ್ದಾರೆ. ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದ ಅವರು ಲಾಲ್ ಬಾಗ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಹೃದಯಾಘಾತದಿಂದ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ, ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನ ಅಗಲಿದ್ದಾರೆ.

ಸಣ್ಣ ಸತ್ಯ, ಗರ ಚಿತ್ರಗಳ ನಿರ್ದೇಶಕ ಮಾಡಿದ್ದ ಅವರು ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾಗಳನ್ನ ನಿರ್ಮಿಸಿದ್ದರು ಆರೋಗ್ಯದಲ್ಲಿ ವ್ಯತ್ಯಯ ಉಂಟಾದಾಗ ಆಸ್ಪತ್ರೆಗೆ ಹೋಗಿದ್ದರು ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಬ್ರೈನ್ ಟೂಮರ್ ಇರೋದು ಬೆಳಕಿಗೆ ಬಂದಿದೆ.

ಶ್ರದ್ದಾ ವಿಕೃತ ಹತ್ಯೆ ಹಿಂದೆ ಲವ್ ಜಿಹಾದ್ ಶಂಕೆ, ಗಲ್ಲು ಶಿಕ್ಷೆಗೆ ಒತ್ತಾಯ

ಕೂಡಲೇ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು ಅದು ಯಶಸ್ವಿಯಾಗಿತ್ತು ಆದರೆ ಸ್ವಲ್ಪ ಸಮಯದ ನಂತರ ಹೃದಯಾಘಾತವಾಗಿದೆ. ಗರ ಸಿನಿಮಾಗಾಗಿ ಬಾಲಿವುಡ್ ನ ಜಾನಿ ಲಿವರ್ ಅವರನ್ನು ಕನ್ನಡಕ್ಕೆ ಕರೆತಂದಿದ್ದರು,

ರಿಷಿ ಸುನಕ್‍ ಮತ್ತು ಮೋದಿ ಮೊದಲ ಭೇಟಿ

ವೃತ್ತಿಯಲ್ಲಿ ವಕೀಲರಾದರೂ, ಸಿನಿಮಾನ ಪ್ರವೃತ್ತಿಯಾಗಿಸಿಕೊಂಡಿದ್ದರು ಸಹಕಾರ ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನದ ವೇಳೆ ಹಲವು ಚಿತ್ರರಂಗದ ಗಣ್ಯರು ಅಗಮಿಸಿ ಅಂತಿಮ ನಮನ ಸಲ್ಲಿಸಿದರು.
ಇಂದು ಮಧ್ಯಾಹ್ನ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

Articles You Might Like

Share This Article