Thursday, July 4, 2024
Homeರಾಷ್ಟ್ರೀಯಮೋದಿ ಪದಗ್ರಹಣಕ್ಕೆ ಸಾಕ್ಷಿಯಾಗಲಿದ್ದಾರೆ ನೈರ್ಮಲ್ಯ ಕಾರ್ಯಕರ್ತರು, ಟ್ರಾನ್ಸ್‌ಜೆಂಡರ್‌ಗಳು

ಮೋದಿ ಪದಗ್ರಹಣಕ್ಕೆ ಸಾಕ್ಷಿಯಾಗಲಿದ್ದಾರೆ ನೈರ್ಮಲ್ಯ ಕಾರ್ಯಕರ್ತರು, ಟ್ರಾನ್ಸ್‌ಜೆಂಡರ್‌ಗಳು

ನವದೆಹಲಿ,ಜೂ.7- ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿ ಸೆಂಟ್ರಲ್‌ ವಿಸ್ಟಾ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡಿದ ನೈರ್ಮಲ್ಯ ಕಾರ್ಯಕರ್ತರು, ಟ್ರಾನ್ಸ್ ಜೆಂಡರ್‌ಗಳು ಮತ್ತು ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ಮೋದಿಯವರ ಮೂರನೇ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿತರಾರ ವಿಕಸಿತ್‌ ಭಾರತ್‌ ರಾಯಭಾರಿಗಳು ವಂದೇ ಭಾರತ್‌ ಮತ್ತು ಮೆಟ್ರೋ ರೈಲುಗಳಲ್ಲಿ ಕೆಲಸ ಮಾಡುವ ರೈಲ್ವೆ ನೌಕರರು ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಸುಮಾರು 8,000 ಅತಿಥಿಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತತ್ವದ ಎನ್‌ಡಿಎ ಒಕ್ಕೂಟವು ಗೆದ್ದ ನಂತರ ನರೇಂದ್ರ ಮೋದಿ ಅವರು ದಾಖಲೆಯ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚುನಾವಣಾ ಫಲಿತಾಂಶದ ಒಂದು ದಿನದ ನಂತರ ದೆಹಲಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಔಪಚಾರಿಕವಾಗಿ 73 ವರ್ಷ ವಯಸ್ಸಿನವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿವೆ.

ಸಮಾರಂಭಕ್ಕೆ ದಕ್ಷಿಣ ಏಷ್ಯಾದ ವಿವಿಧ ನಾಯಕರನ್ನು ಆಹ್ವಾನಿಸಲಾಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆ ಈಗಾಗಲೇ ತಮ ಉಪಸ್ಥಿತಿಯನ್ನು ಖಚಿತಪಡಿಸಿದ್ದಾರೆ.ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಾಲ್‌ ಪ್ರಚಂಡ, ಅವರ ಭೂತಾನ್‌ ಕೌಂಟರ್‌ ಟ್ಶೆರಿಂಗ್‌ ಟೋಬ್ಗೇ ಮತ್ತು ಮಾರಿಷಸ್‌‍ ಪ್ರಧಾನಿ ಪ್ರವಿಂದ್‌ ಜುಗ್ನಾಥ್‌ ಅವರಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ನಂತರ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯುತ್ತಿರುವ ಎರಡನೇ ಭಾರತೀಯ ಪ್ರಧಾನಿ ಮೋದಿಯಾಗಿರುವುದು ವಿಶೇಷವಾಗಿದೆ.

RELATED ARTICLES

Latest News