ಬೆಂಗಳೂರು,ಫೆ.10- ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ವಿರೋಧದ ನಡುವೆಯೂ ನಗರದ ಸ್ಯಾಂಕಿ ರಸ್ತೆ ಮೇಲ್ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬಾಷ್ಯಂ ಸರ್ಕಲ್‍ನಿಂದ ಮಲ್ಲೇಶ್ವರಂ 18ನೇ ಕ್ರಾಸ್‍ವರೆಗೂ ಮೇಲ್ಸೇತುವೆ ನಿರ್ಮಾಣ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.
ಮೇಲ್ಸೇತುವೆ ನಿರ್ಮಾಣಕ್ಕಾಗಿ ಈ ಹಿಂದೆ 25 ಕೋಟಿ ರೂ.ಗಳನ್ನು ನಿಗಪಡಿಸಲಾಗಿತ್ತು. ಆದರೆ, ಇದೀಗ ಕಾಮಗಾರಿ ವೆಚ್ಚ 35 ಕೋಟಿ ರೂ.ಗಳಿಗೆ ಏರಿಕೆಯಾಗಿದೆ.
ರಾಜ್ಯಪಾಲರ ಭಾಷಣದ ವೇಳೆ ಕಾಂಗ್ರೆಸ್ ಕುರ್ಚಿಗಳು ಖಾಲಿ ಖಾಲಿ
ಸ್ಯಾಂಕಿ ಕೆರೆ ಸಮೀಪ ಮೇಲ್ಸೇತುವೆ ನಿರ್ಮಾಣದಿಂದ ಯಾವುದೇ ಪ್ರಯೋಜನವಿಲ್ಲ. ಇದರಿಂದ ನಾಗರೀಕರಿಗೆ ಹಲವಾರು ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ಯಾವುದೇ ಕಾರಣಕ್ಕೂ ಸೇತುವೆ ನಿರ್ಮಾಣ ಮಾಡುವುದು ಬೇಡ ಎಂದು ಹಲವಾರು ಸಂಘಸಂಸ್ಥೆಗಳು ಒತ್ತಾಯಿಸಿದ್ದವು.
ಸರ್ಕಾರಕ್ಕೆ ರಾಜ್ಯಪಾಲರ ಶಭಾಷ್‍ಗಿರಿ
ಆದರೆ, ಆ ಭಾಗದ ವಾಹನದಟ್ಟಣೆ ಸಮಸ್ಯೆ ನಿವಾರಣೆ ಉದ್ದೇಶದಿಂದ ಮೇಲ್ಸೇತುವೆ ಅಗತ್ಯವಿದೆ ಎಂದು ಪಟ್ಟು ಹಿಡಿದಿರುವ ಬಿಬಿಎಂಪಿ ಸೇತುವೆ ನಿರ್ಮಾಣಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಿಸಲು ತೀರ್ಮಾನಿಸಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
Sanki Road, flyover, constructed, BBMP,