ಬೆಂಗಳೂರು, ಜ.27- ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ನೀಡಿದ್ದ ಸುಳ್ಳು ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್‍ರೆಡ್ಡಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಪ್ರಕರಣದಲ್ಲಿ ಆರೋಪ ಹೊತ್ತಿರುವ ಕಾಟನ್‍ಪೇಟೆ ಇನ್ಸ್ ಪೆಕ್ಟರ್ ಪ್ರವೀಣ್ ಅವರನ್ನು ಅಮಾನತುಗೊಳಿಸಿ ಹೇಳಿಕೆ ಕೂಡ ದಾಖಲಿಸಿಕೊಂಡಿದ್ದು, ಈ ಸಂಬಂಧ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ನಕಲಿ ಅಂಕಪಟ್ಟಿ ದಂಧೆ: ಕಾಲೇಜು, ಶಿಕ್ಷಣ ಸಂಸ್ಥೆಗಳ ಮೇಲೆ ಸಿಸಿಬಿ ದಾಳಿ
ಪ್ರಕರಣವೊಂದರಲ್ಲಿ ಬಂಧಿತನಾಗಿ ಸಿಐಡಿ ವಶದಲ್ಲಿರುವ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸು ದಾಖಲಿಸಿಕೊಂಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದ್ದು, ತನಿಖೆ ನಡೆಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಸ್ಯಾಂಟ್ರೋ ರವಿಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಿಐಡಿ ಪೊಲೀಸರೇ ಅಧಿಕೃತಗೊಳಿಸಬೇಕಿದೆ ಎಂದರು.
ಬಿಪಿ, ಶುಗರ್‍ನಿಂದ ಬಳಲುತ್ತಿದ್ದ ಆತನಿಗೆ ಸಿಐಡಿ ಅಧಿಕಾರಿಗಳು ರಾತ್ರಿಯೇ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು, ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Santro Ravi, wife, complaint, case, commissioner, prathap reddy,