Sunday, September 8, 2024
Homeರಾಜ್ಯವಿಶ್ವದ ಶ್ರೇಷ್ಠ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ನಿಧನ

ವಿಶ್ವದ ಶ್ರೇಷ್ಠ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ನಿಧನ

ಮೈಸೂರು, ಜೂ.12- ವಿಶ್ವ ಸಂಗೀತ ಲೋಕದ ಧ್ರುವತಾರೆ, ಖ್ಯಾತ ಸರೋದ್‌ ವಾದಕ ಪಂ.ರಾಜೀವ್‌ ತಾರಾನಾಥ್‌ ಅವರ ನಿಧನಕ್ಕೆ ಸಂಗೀತ ಕ್ಷೇತ್ರದ ದಿಗ್ಗಜರು, ಸಚಿವರು, ಶಾಸಕರು, ಕಲಾವಿದರು, ನ್ಯಾಯಾಧೀಶರು ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಪಂ.ರಾಜೀವ್‌ ತಾರಾನಾಥ್‌ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ರಾಜೀವ್‌ ತಾರಾನಾಥ್‌ ಅವರು ಕರ್ನಾಟಕದ ಹೆಮೆಯ ದಿಗ್ಗಜ ಕಲಾವಿದರಲ್ಲಿ ಒಬ್ಬರು, ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಅವರ ಹೆಸರು ಅಜರಾಮರವಾಗಿ ಉಳಿಯುವಂತಹದ್ದು ಎಂದು ಅವರು ಶೋಕ ಸಂದೇಶದಲ್ಲಿ ಬಣ್ಣಿಸಿದ್ದಾರೆ.

ಅಂತಹ ಅದ್ಭುತ ಕಲಾವಿದ ವಿಧಿವಶರಾಗಿದ್ದು ನಮ ದುರ್ದೈವ, ಅವರ ನಿಧನದಿಂದ ಕರ್ನಾಟಕದ ಸಾಂಸ್ಕೃತಿಕ ಲೋಕ ಬಹಳ ದೊಡ್ಡ ನಷ್ಟ ಅನುಭವಿಸಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.ದೇಶ ವಿದೇಶಗಳಲ್ಲಿ ಅವರು ತಮ ಸಂಗೀತದ ಮೂಲಕ ಕರ್ನಾಟಕದ ಕೀರ್ತಿಯನ್ನ ಪಸರಿಸಿದ್ದಾರೆ, ಕ್ಯಾಲಿೇರ್ನಿಯಾ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಸಹ ಕಾರ್ಯ ನಿರ್ವಹಿಸಿದ್ದರು.

ಸಂಗೀತ ನಾಟಕ ಅಕಾಡೆಮಿ ಹಾಗೂ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದ ರಾಜೀವ್‌ ತಾರಾನಾಥ್‌ ಈ ದೇಶ ಕಂಡ ಅತ್ಯಂತ ಅಪರೂಪದ ಕಲಾವಿದರು.

ರಾಜೀವ್‌ ತಾರಾನಾಥ್‌ ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳು ಹಾಗೂ ಶಿಷ್ಯ ವೃಂದದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ, ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ ಸಂದೇಶದಲ್ಲಿ ತಿಳಿಸಿದ್ದಾರೆ.
ತಾರಾನಾಥ್‌ ಅವರ ನಿಧನದಿಂದ ಸಂಗೀತ ಕ್ಷೇತ್ರ ಸೊರಗಿದಂತಾಗಿದೆ ಎಂದು ಸಂಗೀತ ಕ್ಷೇತ್ರದ ಅನೇಕ ದಿಗ್ಗಜರು ತಮ ಸಂತಾಪಸೂಚಕದಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.ಸಚಿವರು, ಕಲಾವಿದರು ತಾರಾನಾಥ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

RELATED ARTICLES

Latest News