ಹಾಸನ,ಆ.9- ನಗರದಲ್ಲೊಂದು ಪೈಶಾಚಿಕ ಕೃತ್ಯ ನಡೆದಿದೆ. ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮುಕರು 27 ವರ್ಷದ ಬುದ್ದಿಮಾಂದ್ಯ ಯುವತಿ ಮೇಲೆ 8 ದಿನಗಳ ಹಿಂದೆ ಅತ್ಯಾಚಾರವೆಸಗಿದ್ದಲ್ಲದೆ, ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ನಂತರ ಡಿಲೀಟ್ ಮಾಡಿರುವುದು ಗೊತ್ತಾಗಿದೆ.ಈ ಸಂಬಂದ ಯುವತಿಯ ಸಹೋದರ ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಸಹೋದರ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಗಳಾದ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರು ತನಿಖೆ ಕೈಗೊಂಡಿದ್ದು, ಅತ್ಯಾಚಾರ ನಡೆದ ಸ್ಥಳ ಹಾಗೂ ಯಾವಾಗ ನಡೆದಿದೆ ಎಂಬ ಮಾಹಿತಿಯ ಬಗ್ಗೆ ಕಲೆ ಹಾಕುತ್ತಿದ್ದಾರೆ.
ಮೂವರು ಯುವಕರು ವಶಕ್ಕೆ :
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
- ಧರ್ಮಸ್ಥಳ ಗ್ರಾಮದ ಹೊಸ ಸ್ಥಳದಲ್ಲಿ ಉತ್ಖನನ
- ಬೈಕ್ಗೆ ಲಾರಿ ಡಿಕ್ಕಿಯಾಗಿ ವರಮಹಾಲಕ್ಷ್ಮೀ ಹಬ್ಬದ ದಿನವೇ ನವ ವಿವಾಹಿತೆ ಸಾವು
- ಬೆಂಗಳೂರು : ಸ್ನೇಹಿತರಿಂದಲೇ ರೌಡಿಶೀಟರ್ ಕೊಲೆ
- ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಿಜೆಪಿ ತಯಾರಿ
- ಬೆಂಗಳೂರಿಗರೇ ಗಮನಿಸಿ, ನಾಳೆ ಪ್ರಾಧಾನಿ ಆಗಮನದ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ