ಸತೀಶ್ ಜಾರಕಿಹೊಳಿ ಹೇಳಿಕೆ ಪೂರ್ವ ಯೋಜಿತ ಮತ್ತು ವ್ಯವಸ್ಥಿತ: ಸಿಎಂ ಬೊಮ್ಮಾಯಿ

Social Share

ಉಡುಪಿ.ನ.8-ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕರ ಸಮ್ಮತಿ ಇದೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದ ಕುರಿತು ಮಾತನಾಡಿರುವ ಜಾರಕಿಹೊಳಿ ಕ್ಷಮೆ ಕೇಳುವ ಬದಲು ಸಮರ್ಥಿಸಿಕೊಂಡಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಾರೆಯೇ ಇಲ್ಲವೇ ಖಂಡಿಸುತ್ತಾರೆಯೇ ಎಂದು ಪ್ರಶ್ನೆ ಹಾಕಿದರು.

ಅರೆಮರೆ ಓದಿಕೊಂಡಿರುವ ಸತೀಶ್ ಜಾರಕಿಹೊಳಿ ಪ್ರಬುದ್ದನಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಹಿಂದೂ ಧರ್ಮವನ್ನು ಟೀಕೆ ಮಾಡಿದರೆ ಅಲ್ಪಸಂಖ್ಯಾತರ ಮತಗಳು ಬರಬಹುದೆಂಬ ಭ್ರಮೆಯಲ್ಲಿದ್ದಾರೆ. ಇದು ನಿಮಗೆ ತಿರುಗುಬಾಣವಾಗಬಹುದ ಎಂದು ಎಚ್ಚರಿಸಿದರು.

ಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ: ಸಚಿವ ಸುನಿಲ್ ಕುಮಾರ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಇದನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆಯೇ ನಿಮ್ಮ ಸಮ್ಮತಿ ಇಲ್ಲದಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

ಹಿಂದೂ ಪದದ ಅರ್ಥ ಕುರಿತು ಅವರ ಹೇಳಿಕೆ ಇಡೀ ಭಾರತೀಯರಿಗೆ ಮಾಡಿದ ಅಪಮಾನ. ಈ ವಿಷಯದಲ್ಲಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರ ಮೌನವೇಕೆ? ಪಕ್ಷ ಬೆಂಬಲ ನೀಡುತ್ತದೆಯೇ ಎಂದು ಭಾವಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್‌ನನ್ನು ಜನತೆ ಕ್ಷಮಿಸುವುದಿಲ್ಲ: ಅರುಣ್ ಸಿಂಗ್

ಅಲ್ಪಸಂಖ್ಯಾತರ ಮತಗಳಿಗಾಗಿ ಹಿಂದೂ ಧರ್ಮ ಹೀಯಗಳೆಯುವುದನ್ನು ನಿಲ್ಲಿಸಬೇಕು. ಸತೀಶ್ ಜಾರಕಿಹೊಳಿ ಸುಖಾಸುಮ್ಮನೆ ಹೇಳಿಲ್ಲ. ಇದು ಪೂರ್ವ ಯೋಜಿತ ಮತ್ತು ವ್ಯವಸ್ಥಿತವಾಗಿ ನೀಡಿರುವ ಹೇಳಿಕೆ. ಇದನ್ನು ಎಲ್ಲರು ಖಂಡಿಸಬೇಕು ಎಂದು ಒತ್ತಾಯಿಸಿದರು.

ನಾನು ಅವರ ಹೇಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಯಾರೇ ಆಗಲಿ ಮತ ಬ್ಯಾಂಕ್‍ಗಾಗಿ ಒಂದು ಧರ್ಮದ ಅರ್ಥವನ್ನು ಈ ರೀತಿ ಅರ್ಥೈಸುವುದು ಸರಿಯಲ್ಲ. ಮೊದಲು ಕ್ಷಮೆ ಕೇಳಿ ಎಂದು ಬೊಮ್ಮಾಯಿ ಒತ್ತಾಯಿಸಿದರು.

Articles You Might Like

Share This Article