ಸತೀಶ್ ಜಾರಕಿಹೊಳಿ ತಕ್ಷಣ ಕ್ಷಮೆ ಕೇಳಬೇಕು : ಬಿಎಸ್‌ವೈ

Social Share

ಬೆಂಗಳೂರು,ನ.9- ಹಿಂದೂ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಕ್ಷಣವೇ ಕ್ಷಮಾಪಣೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿದ ಮಾತನ್ನೂ ಯಾರೊಬ್ಬರು ಒಪ್ಪಲು ಸಾಧ್ಯವಿಲ್ಲ. ಸ್ವತಃ ಅವರ ಪಕ್ಷದವರೇ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಹೇಳಿದ್ದನ್ನು ಮತ್ತೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಸತೀಶ್ ಜಾರಕಿಹೊಳಿ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಒಂದು ವೇಳೆ ತಾವು ಹೇಳಿದ್ದೇ ಸರಿ ಎನ್ನುವುದಾದರೆ ಕೆಪಿಸಿಸಿಯವರು ಅವರ ಮೇಲೆ ಶಿಸ್ತುಕ್ರಮ ಜರುಗಿಸಲಿ. ಒಂದು ಧರ್ಮದ ಮತಕ್ಕಾಗಿ ಇನ್ನೊಂದು ಧರ್ಮವನ್ನು ಹಿಯಾಳಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಅವರು ಮಾಡಿದ್ದಾರೆ. ತಕ್ಷಣವೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನರೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪ, 6 ಮಂದಿ ಸಾವು

ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಯಲಿದೆ. ಇಂಥ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು, ಕರ್ನಾಟಕದ ವಿಷಯ ಬಂದಾಗ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿಗಳಿದ್ದಾಗ ಚರ್ಚೆಗೆ ಬರುತ್ತದೆ ಎಂದು ಹೇಳಿದರು.

ಕನ್ನಡ ಚಿತ್ರರಂಗದ ಮೇರು ನಟ ಲೋಹಿತಾಶ್ವ ವಿಧಿವಶ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ನನಗೆ ಗೊತ್ತಿಲ್ಲದ ಯಾವುದೇ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟನೆ ಕೊಟ್ಟರು.

ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ ಸ್ರ್ಪಸುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ನಾನು ಶಿಕಾರಿಪುರದಿಂದ ಸ್ರ್ಪಸಬೇಕೆಂದು ಸೂಚಿಸಿದ್ದೇನೆ. ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದವಾಗಿರಬೇಕಾಗುತ್ತದೆ ಎಂದು ಹೇಳಿದರು.

Articles You Might Like

Share This Article