ನವದೆಹಲಿ,ಆ.5– ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲ್ಲಿಕ್ ಅವರು ಕೊನೆ ಉಸಿರೆಳೆದಿದ್ದಾರೆ.79 ವರ್ಷದ ಜೈನ್ ಅವರು ದೆಹಲಿಯ ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಅವರ ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸತ್ಯಪಾಲ್ ಮಲ್ಲಿಕ್ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ ಸಿಂಗ್, ಜೆ.ಪಿ.ನಡ್ಡಾ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಆಗಸ್ಟ್ 2018, 2019ರ ಅಕ್ಟೋಬರ್‌ವರೆಗೆ ಜಮು ಮತ್ತು ಕಾಶೀರದ ರಾಜ್ಯಪಾಲರಾಗಿದ್ದ ಅವರು ಸಂವಿಧಾನದ 370ನೇ ತಿದ್ದುಪಡಿ ರದ್ದುಪಡಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ನಂತರ ಗೋವಾ, ಮೇಘಾಲಯ ಮತ್ತು ಬಿಹಾರ ರಾಜ್ಯಪಾಲರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿತ್ತು.