ಹೊಸದಿಲ್ಲಿ,ಜ.18- ಚುನಾವಣೆಯಲ್ಲಿ ಸ್ರ್ಪಧಿಸುವ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಸಾರ್ವಜನಿಕವಾಗಿ ಪ್ರಕಟಿಸದ ರಾಜಕೀಯ ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸು ವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ.
ಈ ಮೂಲಕ ಎಲ್ಲಾ ರಾಜಕೀಯ ಪಕ್ಷಗಳಿಗೆ ಧರ್ಮ ಸಂಕಟ ಎದುರಾಗಿದೆ. ಜೊತೆಯಲ್ಲಿ ಸ್ವಚ್ಚ ರಾಜಕಾರಣದ ನಿರೀಕ್ಷೆಯಲ್ಲಿದ್ದವರಿಗೆ ಮಿಣುಕು ದೀಪದ ಬೆಳಕೊಂದು ಕಾಣಸಿಗುವಂತಾಗಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಹಿರಿಯ ವಕೀಲ ಅಶ್ವಿನ್ ಕುಮಾರ್ ದುಬೆ ಅವರ ಮೂಲಕ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿ ಮಹತ್ವದ ವಿಚಾರಣೆಗೆ ನಾಂದಿಯಾಡಿದ್ದಾರೆ.
ಅಶ್ವಿನ್ ಕುಮಾರ್ ಅವರು ತಮ್ಮ ಅರ್ಜಿಯಲ್ಲಿ ರಾಜಕೀಯ ಪಕ್ಷ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಗೆ ಟಿಕೆಟ್ ನೀಡಿದಾಗ ಆತನ ಪೂರ್ವಾಪರಗಳನ್ನು ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಕಟಿಸಬೇಕು. ಜೊತೆಗೆ ಆತನಿಗೆ ಏಕೆ ಆದ್ಯತೆ ನೀಡಲಾಗಿದೆ. ಕ್ರಿಮಿನಲ್ ಪೂರ್ವಾಪರಗಳಿಲ್ಲದ ನಿಷ್ಕಳಂಕ ಅಭ್ಯರ್ಥಿಯನ್ನು ಏಕೆ ಆಯ್ಕೆ ಮಾಡಲಿಲ್ಲ ಎಂಬುದನ್ನು ವಿವರಿಸಬೇಕು.
ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಸುಪ್ರೀಂಕೋರ್ಟ್‍ನ ನಿರ್ದೇಶನಗಳನ್ನು ಪಾಲಿಸದ ರಾಜಕೀಯ ಪಕ್ಷಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು, ಜೊತೆಗೆ ಪಕ್ಷದ ಮಾನ್ಯತೆಯನ್ನು ರದ್ದು ಪಡಿಸಬೇಕು ಎಂದು ಮನವಿ ಮಾಡಲಾಗಿತ್ತು.
ಅರ್ಜಿದಾರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ. ಈ ಮೂಲಕ ಹೊಸ ಬೆಳವಣಿಗೆಗೆ ನಾಂದಿಯಾಡಿದಂತಾಗಿದೆ.
ಈ ಮೊದಲು ತೀಪೆರ್ದಪೋ0ನ್ನು ನೀಡಿರುವ ಸುಪ್ರೀಂಕೋರ್ಟ್, ಚುನಾವಣಾ ಅಭ್ಯರ್ಥಿ ತನ್ನ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿವರಗಳನ್ನು ಪ್ರಕಟಿಸಬೇಕು ಎಂದು ಸೂಚನೆ ನೀಡಿತ್ತು.
