ಎಸ್‍ಸಿ ಒಳಮೀಸಲಾತಿ ಜಾರಿಗೆ ಸಂಪುಟ ಉಪಸಮಿತಿ ರಚನೆ

Social Share

ಬೆಂಗಳೂರು,ಡಿ.13- ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳಮೀಸಲಾತಿ) ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಿದೆ.

ಸಮಿತಿಗೆ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷರಾದರೆ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಅಂಗಾರ, ಪ್ರಭು ಚವ್ಹಾಣ್ ಹಾಗೂ ಡಾ.ಕೆ.ಸುಧಾಕರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಶಿಫಾರಸ್ಸುಗಳನ್ನು ಮಾಡಬೇಕೆಂದು ಅಧಿಸೂಚನೆಯಲ್ಲಿ ಹೊರಡಿಸಲಾಗಿದೆ.

ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡಬೇಕೆಂದು ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪಂಗಡದವರು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲೇ ಸರ್ಕಾರ ಈ ಸಮಿತಿಯನ್ನು ರಚಿಸಿರುವುದು ವಿಶೇಷ.

ಚುನಾವಣೆ ಎದುರಿಸಲು ರಾಜ್ಯ ಬಿಜೆಪಿಯಲ್ಲಿ ವರ್ಚಸ್ವಿ ನಾಯಕನ ಕೊರತೆ

ಕಳೆದ ಒಂದು ತಿಂಗಳಿನಿಂದ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯದವರು ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಪರಿಶಿಷ್ಟ ಜಾತಿಯಲ್ಲಿರುವ ಹಲವಾರು ಸಮುದಾಯಗಳಿಗೆ ಸಂವಿಧಾನಬದ್ದವಾಗಿ ಮೀಸಲಾತಿ ನೀಡಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಸದಾಶಿವ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು.

ಡಿ.ವಿ.ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ವರದಿಯನ್ನು ಸಲ್ಲಿಸಲಾಗಿತ್ತು. ಪರಿಶಿಷ್ಟ ಜಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಲಾಗಿತ್ತು. ಎ ವರ್ಗದಲ್ಲಿನ ಎಡಗೈ ಉಪಪಂಗಡಗಳಿಗೆ ಶೇ.6ರಷ್ಟು , ಬಿ ವರ್ಗದಲ್ಲಿ ಸೇರ್ಪಡೆಯಾಗಲಿವೆ ಎಂದು ಹೇಳಲಾದ ಬಲಗೈ ಉಪಪಂಗಡಗಳಿಗೆ ಶೇ.5ರಷ್ಟು, ಭೋವಿ ಮತ್ತು ಲಂಬಾಣಿ ಸಮುದಾಯಕ್ಕೆ ಶೇ.3 ಹಾಗೂ ಇತರ ಉಪಜಾತಿಗಳಿಗೆ ಶೇ.1ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಆಯೋಗ ಶಿಫಾರಸ್ಸು ಮಾಡಿತ್ತು.

ತಂದೆಯನ್ನು ಕೊಂದು, 30 ತುಂಡುಗಳನ್ನಾಗಿ ತುಂಡರಿಸಿದ ಪಾಪಿ ಪುತ್ರ

ಆದರೆ ಈ ಆಯೋಗದ ಶಿಫಾರಸ್ಸಿಗೆ ಪರ-ವಿರೋಧ ವ್ಯಕ್ತವಾಗಿದ್ದರಿಂದ ವರದಿಯನು ಅನುಷ್ಠಾನ ಮಾಡಲು ಸರ್ಕಾರ ಹಿಂದೇಟು ಹಾಕಿತ್ತು. ಈಗ ರಾಜ್ಯ ಸರ್ಕಾರ ಸಂಪುಟ ಉಪಸಮಿತಿಯನ್ನು ರಚಿಸಿರುವುದು ವಿಶೇಷವಾಗಿದೆ.

SC reservation, cabinet sub-committee, Formation, jc madhuswamy,

Articles You Might Like

Share This Article