ಪ.ಜಾ ಹಾಗೂ ಪ.ಪಂಗಡದವರಿಗೆ ಮೀಸಲಾತಿ ಹೆಚ್ಚಿಸಿ ಸುಗ್ರೀವಾಜ್ಞೆ ಜಾರಿ

Social Share

ಬೆಂಗಳೂರು,ಅ.20- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದಕ್ಕೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಇದರಿಂದ ಸರ್ಕಾರದ ಈ ತೀರ್ಮಾನದಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3ರಿಂದ 7ಕ್ಕೆ ಹೆಚ್ಚಳವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲು ತೆಗೆದುಕೊಂಡಿದ್ದ ತೀರ್ಮಾನದಂತೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲು ಸಂಪುಟ ಸಭೆ ತೀರ್ಮಾನಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸಂವಿಧಾನದ ಪರಿಚ್ಛೇದ 14,15 ಹಾಗೂ 35 ಸೇರಿ ಎಲ್ಲವನ್ನೂ ಕೂಲಕಂಷವಾಗಿ ಪರಿಶೀಲಿಸಿ ಸುಗೀವಾಜ್ಞೆ ಮೂಲಕ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ನಾವು ಬೇರೆ ಯಾವುದೇ ಸಮುದಾಯದ ಮೀಸಲಾತಿಯನ್ನು ಕಿತ್ತು ಹಾಕುವುದಾಗಲಿ, ಇಲ್ಲವೇ ರದ್ದುಪಡಿಸುವುದಿಲ್ಲ. ಕಾನೂನು ಮತ್ತು ಸಂಧಾನದ ಚೌಕಟ್ಟಿನೊಳಗೆ ಈ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಈ ಹಿಂದೆ ಶೇ.100ರಷ್ಟು ಮೀಸಲಾತಿ ಪ್ರಮಾಣ ಇದ್ದಾಗಲೂ ಆರ್ಥಿಕವಾಗಿ ಹಿಂದುಳಿದ ಸಮುದಾಯದವರೆಗೆ ಶೇ.10ರಷ್ಟು ಮೀಸಲಾತಿಯನ್ನು ಕೊಟ್ಟಿದೆ. ಆಗಲೂ ಕೂಡ ಯಾವುದೇ ಸಮುದಾಯದ ಮೀಸಲಾತಿಯನ್ನು ತೆಗೆದುಹಾಕಿಲ್ಲ. ಅದೇ ಮಾದರಿಯಲ್ಲಿ ನಾವೂ ಕೂಡ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನದಾಸ್ ಅವರು ರಾಜ್ಯಸರ್ಕಾರಕ್ಕೆ ಹಲವಾರು ಶಿಫಾರಸುಗಳನ್ನು ಮಾಡಿದ್ದಾರೆ. ಅದರಂತೆ ನಾವು ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ಎಸ್ಸಿ-ಎಸ್ಟಿಗೆ ಮೀಸಲಾತಿ ಹೆಚ್ಚಳ ಮಾಡುವುದು ಹಾಗೂ ಇದೇ ಸಮುದಾಯದಲ್ಲಿ ಆರ್ಥಿಕವಾಗಿ ಪ್ರಬಲವಾಗಿರುವವರು ಮೀಸಲಾತಿಯನ್ನು ಬಿಟ್ಟುಕೊಡಬೇಕೆಂದು ಸಲಹೆ ಮಾಡಿದ್ದಾರೆ.

ಪ್ರಾಣಿಗಳಲ್ಲಿ ರೂಪಾಂತರಗೊಂಡು ಓಮಿಕ್ರಾನ್ ಮನುಷ್ಯರಿಗೆ ಹರಡಿದೆ

ಇನ್ನೊಂದೆಡೆ ನ್ಯಾ.ಸದಾಶಿವ ಆಯೋಗ ಕೂಡ ಒಳ ಮೀಸಲಾತಿಯನ್ನು ಅನುಷ್ಠಾನ ಮಾಡಲು ಸಲಹೆ ಕೊಟ್ಟಿದೆ. ಇವೆಲ್ಲವನ್ನು ಪರಿಶೀಲಿಸಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಹೇಗೆ ಆಗುತ್ತದೆ. ಬೇರೆಯವರಿಂದ ಕಿತ್ತುಕೊಡುತ್ತೇವೆ. ರದ್ದುಪಡಿಸುತ್ತೇವೆ ಇಂತಹ ಯಾವುದೇ ಅನುಮಾನ ಬೇಡ ಎಂದು ಮಾಧುಸ್ವಾಮಿ ಪುನರುಚ್ಚರಿಸಿದರು.

ಸುಗ್ರೀವಾಜ್ಞೆ ಹೊರಡಿಸಿದ ತಕ್ಷಣ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಯಾರೊಬ್ಬರೂ ಭಾವಿಸಬೇಕಾಗಿಲ್ಲ. ಅದರ ರಕ್ಷಣೆ ಪಡೆಯುವುದಕ್ಕಾಗಿಯೇ ಸಂವಿಧಾನದ ಷೆಡ್ಯುಲ್ 9ಗೆ ತಿದ್ದುಪಡಿ ಮಾಡಬೇಕು. ಈ ತಿದ್ದುಪಡಿ ಆಗಬೇಕಾದರೆ ಸಂಸತ್ತಿನಲ್ಲಿ ಮೂರನೆ ಎರಡರಷ್ಟು ಬಹುಮತದಿಂದ ಅಂಗೀಕಾರವಾಗಬೇಕು. ಇದಕ್ಕೆ ಸಾಕಷ್ಟು ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದು ತಿಳಿಸಿದರು.

ಷೆಡ್ಯೂಲ್ 9ಗೆ ತಿದ್ದುಪಡಿಯಾದರೂ ಕೂಡ ನ್ಯಾಯಾಲಯ ಮಧ್ಯ ಪ್ರವೇಶ ಮಾಡಬಾರದೆಂಬ ನಿಯಮವೇನೂ ಇಲ್ಲ. ಕೆಲವು ವಿಷಯಗಳಲ್ಲಿ ಮಾತ್ರ ವಿನಾಯ್ತಿ ನೀಡಲಾಗುತ್ತದೆ. ತಮಿಳುನಾಡು ಸರ್ಕಾರ ಇದೇ ರೀತಿ ಶೇ.69ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಲ್ಲಿಯೂ ಕೂಡ ನ್ಯಾಯಾಲಯ ಮಧ್ಯ ಪ್ರವೇಶ ಮಾಡಿದೆಯೇ ಹೊರತು ಇದಕ್ಕೆ ತಡೆಯಾಜ್ಞೆ ಕೊಟ್ಟಿಲ್ಲ. ಈಗ ನಮಗೂ ಕೂಡ ನ್ಯಾಯಾಲಯ ಮಧ್ಯ ಪ್ರವೇಶ ಮಾಡಲ್ಲ ಎಂಬ ವಿಶ್ವಾಸವಿದೆ ಎಂದು ವಿವರಿಸಿದರು.

ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ನಾಳೆ ಕಳುಹಿಸಿಕೊಡಲಾಗುವುದು. ನಂತರ ಕಾಯ್ದೆ ಅನುಷ್ಠಾನವಾಗಲಿದೆ ಎಂದು ಮಾಧುಸ್ವಾಮಿ ಹೇಳಿದರು. ಪ್ರಸ್ತುತ ಎಸ್ಸಿಯಲ್ಲಿ 103 ಹಾಗೂ ಎಸ್ಟಿಯಲ್ಲಿ 56 ಜಾತಿಗಳಿವೆ. ಮೀಸಲಾತಿಯನ್ನು ಅನುಷ್ಠಾನ ಮಾಡಬೇಕಾದರೆ ಸುಗ್ರೀವಾಜ್ಞೆ ಜಾರಿ ಮಾಡುವುದು ಸೂಕ್ತ ಎಂದು ನಾನೇ ಸಲಹೆ ಕೊಟ್ಟಿದ್ದೇನೆ. ಮುಖ್ಯಮಂತ್ರಿಯವರು ಇದಕ್ಕೆ ಸಮ್ಮತಿಸಿದರು. ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸರ್ಕಾರ ಬದ್ಧವಾಗಿಯೇ ನಡೆದುಕೊಳ್ಳುತ್ತದೆ ಎಂದು ತಿಳಿಸಿದರು.

ಐಕ್ಯತೆಗೆ ಧಕ್ಕೆ ತರುವ ಶಕ್ತಿಗಳನ್ನು ಸಹಿಸಲ್ಲ : ಆರಗ ಜ್ಞಾನೇಂದ್ರ

ಇನ್ನು ಸಚಿವ ಸಂಪುಟ ಸಭೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಒಟ್ಟು 24 ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಯೋಜನೆಯಿಂದ 260 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು 260 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಕರ್ನಾಟಕ ಕೃಷಿ ಸೇವೆಗಳ ನೇಮಕಾತಿಗೆ ತಿದ್ದುಪಡಿ ಮಾಡಲಾಗಿದ್ದು, ಸಂಚಾರಿ ಪಶು ಚಿಕಿತ್ಸಾ ಘಟಕಗಳ ನಿರ್ವಹಣೆಯನ್ನು ಗುತ್ತಿಗೆ ಪಡೆಯಲು ತೀರ್ಮಾನಿಸಲಾಗಿದೆ. 293 ಸಂಚಾರಿ ಘಟಕಗಳ ನಿರ್ವಹಣೆಯನ್ನು ಗುತ್ತಿಗೆಗೆ ಕೊಡಲು ಸಂಪುಟ ಅನುಮೋದಿಸಿದೆ.

ಕಾಗವಾಡದ 23 ಕೆರೆಗಳಿಗೆ ನೀರು ತುಂಬಿಸಲು 229.60 ಕೋಟಿ ವೆಚ್ಚಕ್ಕೆ ಸಮ್ಮತಿ. ವಿಶ್ವೇಶ್ವರಯ್ಯ ಜಲ ನಿಗಮಕ್ಕೆ 250 ಕೋಟಿ ಸಾಲ ಪಡೆಯಲು ಸರ್ಕಾರ ಅನುಮೋದನೆ ಕೊಟ್ಟಿದೆ. ಇದೇ ರೀತಿ ಕರ್ನಾಟಕ ನೀರಾವರಿ ನಿಗಮಕ್ಕೆ 850 ಕೋಟಿ ಖಾತರಿ ಸಾಲ ಪಡೆಯಲು ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ರಾಯಚೂರು ವಿಶ್ವವಿದ್ಯಾಲಯದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 15 ಕೋಟಿ, ವಿಜಯಪುರದ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು 347 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿರುವ ಸಚಿವ ಸಂಪುಟ ಸಭೆ ಈ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರಿಡಲು ಸಮ್ಮತಿಸಿದೆ.

33.92 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಸಂಸ್ಥೆಗಳಿಗೆ ಅನಸ್ಥೇಶಿಯ ಉಪಕರಣಗಳ ಖರೀದಿ, ಸುಬ್ಬಾರೆಡ್ಡಿ ಕಿಂಡಿ ಅಣೆಕಟ್ಟಿಗೆ 47.47 ಕೋಟಿ, ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ 12 ಕೋಟಿ ಅನುದಾನಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದರು.
ಪರಿಶಿಷ್ಟ ಕುಶಲಕರ್ಮಿಗಳಿಗೆ ಉಚಿತವಾಗಿ ನಿವೇಶನಕೊಡುವ ತೀರ್ಮಾನವನ್ನು ಸಂಪುಟ ಸಭೆ ತೆಗೆದುಕೊಂಡಿದೆ.

ಈ ಸಮುದಾಯಕ್ಕೆ ಲೀಜ್ ಆಧಾರದ ಮೇಲೆ ಭೂಮಿಯನ್ನು ನೀಡಲಾಗುತ್ತಿತ್ತು. 18-20 ವರ್ಷಗಳಿಂದ ಜಮೀನು ಅವರ ಸ್ವಾೀನದಲ್ಲಿದ್ದರೆ ಚರ್ಮ ಕೆಲಸ ಮಾಡುವ ಕುಶಲಕರ್ಮಿಗಳಿಗೆ ಉಚಿತವಾಗಿ ಜಮೀನು ನೀಡುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.

ಜಿಲ್ಲಾ ಕೆಳಹಂತದ ನ್ಯಾಯಾಂಗ ಸಿಬ್ಬಂದಿಯ ವೇತನವನ್ನು ಪರಿಷ್ಕರಣೆ ಮಾಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಇದರಂತೆ ಹೈಕೋರ್ಟ್ ಹೊರತು ಪಡಿಸಿ ಉಳಿದ ನ್ಯಾಯಾಲಯಗಳ ಸಿಬ್ಬಂದಿ, ಅಂದರೆ ಜಿಲ್ಲಾ ಮುನ್ಸಿಪಲ್ ಸಿಬ್ಬಂದಿಗೆ ಅನ್ವಯವಾಗಲಿದೆ. ನ್ಯಾಯಾೀಶರು ಹೊರತುಪಡಿಸಿ ಸಿಬ್ಬಂದಿಗಳ ವೇತನ ಪರಿಷ್ಕರಣೆ ಮಾಡಲಾಗಿದೆ. ಒಂದು ವೇಳೆ ಪರಿಷ್ಕರಣೆ ಮಾಡದಿದ್ದರೆ ನ್ಯಾಯಾಂಗ ನಿಂದನೆ ಎದುರಾಗುತಿತ್ತು. ಹಾಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ಅನಿಲ ಬೆಲೆ ಕಡಿತ ಘೋಷಿಸಿದ ಬಿಡೆನ್

ಯಶವಂತಪುರ ಉಲ್ಲಾಳದಲ್ಲಿ ಸುಮಾರು 200 ಕೋಟಿ ವೆಚ್ಚದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ರಾಜಧಾನಿ ಬೆಂಗಳೂರಿನ ರಾಜಕಾಲುವೆ ಅಭಿವೃದ್ಧಿಗೆ 1500 ಕೋಟಿ ಘಟನೋತ್ತರ ಅನುಮೋದನೆ ನೀಡಲಾಗಿದ್ದು, ನೀರು ಸರಾಗವಾಗಿ ಹರಿಯುವಂತೆ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.


Articles You Might Like

Share This Article