Thursday, May 2, 2024
Homeರಾಷ್ಟ್ರೀಯVVPAT ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಸಮ್ಮತಿ

VVPAT ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ, ಏ.3- ವಿದ್ಯುನ್ಮಾನ ಮತ ಯಂತ್ರಗಳಲ್ಲಿ (ಇವಿಎಂ) ಚಲಾಯಿಸಿದ ಮತಗಳನ್ನು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರೈಯಲ್ (ವಿವಿಪಿಎಟಿ) ಮೂಲಕ ಖಾತ್ರಿ ಪಡಿಸಿಕೊಳ್ಳಬೇಕೆಂದು ಸರ್ಕಾರೇತರ (ಸ್ವಯಂಸೇವಾ) ಸಂಸ್ಥೆ ಯೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಯನ್ನು ಮುಂದಿನ ವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ಹೇಳಿದೆ.

ಎನ್‍ಜಿಓ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಚಿಷಯದ ವಿಚಾರಣೆಯನ್ನು ಕ್ಷಿಪ್ರವಾಗಿ ಕೈಗೆತ್ತಿಕೊಳ್ಳಬೇಕೆಂದು ಮನವಿ ಮಾಡಿದ ಬಳಿಕ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಮುಂದಿನ ಮಂಗಳವಾರ ಅಥವಾ ಬುಧವಾರ ಈ ಮನವಿಯ ವಿಚಾರಣೆಯನ್ನು ಕೈಗೆತ್ತುಕೊಳ್ಳುವುದಾಗಿ ತಿಳಿಸಿತು.

ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಈ ಪ್ರಕರಣದ ವಿಚಾರಣೆ ನಡೆಸದಿದ್ದರೆ ಮನವಿ ನಿರರ್ಥಕವಾಗುವುದು ಎಂದು ಈ ಪ್ರರಕಣದಲ್ಲಿ ಹಾಜರಾದ ಹಿರಿಯ ನ್ಯಾಯವಾದಿ ಗೋಪಾಲ್ ಶಂಕರನಾರಾಯಣ್‍ಅವರು ವಾದಿಸಿದರು.

ನ್ಯಾಯಾಲಯಕ್ಕೆ ಸನ್ನಿವೇಶದ ಅರಿವಿದೆ ಮತ್ತು ಮುಂದಿನ ವಾರ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿಗಳಾದ ಎಂಎಂ ಸುಂದರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಖನ್ನಾ ತಿಳಿಸಿದರು.

RELATED ARTICLES

Latest News