ನವದೆಹಲಿ,ಫೆ.16 – ರಾಮಸೇತುವೆ ಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.
ಈವರೆಗೆ ರಾಮಸೇತು ವಿಚಾರದ ಬಗ್ಗೆ ಯಾವುದೇ ವಿಚಾರಣೆ ನಡೆದಿಲ್ಲ. ಇದೀಗ ಮುಖ್ಯ ನ್ಯಾ.ಡಿ.ವೈ ಚಂದ್ರಚೂಡ್ ಮತ್ತು ನ್ಯಾ.ಪಿ.ಎಸ್ ನರಸಿಂಹ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಸಾಂವಿಧಾನಿಕ ಪ್ರಕ್ರೀಯೆಗಳು ಪೂರ್ಣಗೊಂಡ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ರಾಮಸೇತುವೆ ಯನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಜ.19 ರಂದು ಕೋರ್ಟ್ಗೆ ತಿಳಿಸಿದ್ದರು.
ರಾಮ ಸೇತುವೆ ಇರುವಿಕೆಯ ಬಗ್ಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದರಿಂದ ನಾನು ಮೊದಲ ಹೆಜ್ಜೆಯಲ್ಲಿ ಗೆದ್ದಿದ್ದೇನೆ ಎಂದು ಸುಬ್ರಮಣಿಯನ್ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
#SupremeCourt, #SubramanianSwamy, #plea, #declaration, #RamSetu, #NationalHeritageMonument,