Sunday, November 24, 2024
Homeರಾಜಕೀಯ | Politicsಉಪಚುನಾವಣೆ ಗೆದ್ದ ಮಾತ್ರಕ್ಕೆ ಹಗರಣಗಳು ಸುಳ್ಳಾಗಲ್ಲ : ಸಿಎಂಗೆ ಆರ್‌.ಅಶೋಕ್‌ ಟಾಂಗ್

ಉಪಚುನಾವಣೆ ಗೆದ್ದ ಮಾತ್ರಕ್ಕೆ ಹಗರಣಗಳು ಸುಳ್ಳಾಗಲ್ಲ : ಸಿಎಂಗೆ ಆರ್‌.ಅಶೋಕ್‌ ಟಾಂಗ್

Scams do not become false just because they won the by-elections

ಬೆಂಗಳೂರು,ನ.24- ವಿಧಾನಸಭೆ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಕಂಡ ಮಾತ್ರಕ್ಕೆ ಹಗರಣಗಳು ಸುಳ್ಳಾಗುವುದಿಲ್ಲ, ಸತ್ಯ ಒಂದಲ್ಲಾ ಒಂದು ದಿನ ಹೊರಬರಲಿದೆ ಎಂದು ಆರ್‌.ಅಶೋಕ್‌ರವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಾಂಗ್‌ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಹಣದ ಹೊಳೆ ಹರಿಸಿ, ಓಲೈಕೆ ರಾಜಕಾರಣದ ಮೂಲಕ ಒಂದು ಸಮುದಾಯದ ಮತ ಗಳಿಸಿ ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿದೆ ಕಾಂಗ್ರೆಸ್‌‍ ಪಕ್ಷ. ಸಿಎಂ ಸಿದ್ದರಾಮಯ್ಯನವರೇ, ಯಾವುದು ಸುಳ್ಳು, ಯಾವುದು ಅಪಪ್ರಚಾರ ಎಂದು ಪ್ರಶ್ನಿಸಿದ್ದಾರೆ.

ವಾಲೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ?, ಮೂಡಾ ಹಗರಣದಲ್ಲಿ ತಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ ತಪ್ಪನ್ನು ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ?, ಮೂಡಾ ಹಗರಣದಲ್ಲಿ ತಮ ವಿರುದ್ಧ ತನಿಖೆ ಅಗತ್ಯ ಇದೆ ಮಾನ್ಯ ಹೈಕೋರ್ಟ್‌ ಘಂಟಾಘೋಷವಾಗಿ ಹೇಳಿದ್ದು ಸುಳ್ಳಾ ಎಂದು ಲೇವಡಿ ಮಾಡಿದ್ದಾರೆ.

ಮದ್ಯ ಮಾರಾಟಗಾರರ ಸಂಘ ತಮಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಇಲಾಖೆಯಲ್ಲಿ ಮಂಥ್ಲಿ ಮನಿ ಹೆಸರಿನಲ್ಲಿ, ವರ್ಗಾವಣೆ ದಂಧೆಯಲ್ಲಿ, ಲೈಸೆನ್ಸ್ ನವೀಕರಣದಲ್ಲಿ 700 ಕೋಟಿ ರೂಪಾಯಿ ಲಂಚದ ವ್ಯವಹಾರ ನಡೆದಿದೆ ಎಂದು ಹೇಳಿರುವುದು ಸುಳ್ಳಾ?, ವಕ್ಫ್ ಮಂಡಳಿ ಹೆಸರಿನಲ್ಲಿ ಸರ್ಕಾರಿ ಆಸ್ತಿಪಾಸ್ತಿ, ಮಠ ಮಂದಿರಗಳ ಜಾಗ, ರೈತರ ಕೃಷಿ ಜಮೀನುಗಳಿಗೆ ಕಳಿಸಿ, ರಾತೋರಾತ್ರಿ ದಾಖಲೆಗಳನ್ನು ತಿದ್ದುತ್ತಿರುವುದು ಸುಳ್ಳಾ?, ತಮ ಸರ್ಕಾರದ ಭ್ರಷ್ಟಾಚಾರಕ್ಕೆ, ಕಿರುಕುಳಕ್ಕೆ ಈವರೆಗೂ ನಾಲ್ಕು ಜನ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆದಾರರು ಆತಹತ್ಯೆಗೆ ಶರಣಾಗಿರುವ ಘಟನೆಗಳು ಸುಳ್ಳಾ? ಎಂದು ಕಿಡಿಕಾರಿದ್ದಾರೆ.

ನಿಮ ಈ ಕುತಂತ್ರ, ಷಡ್ಯಂತ್ರ, ನಾಟಕ ಜಾಸ್ತಿ ದಿನ ನಡೆಯುವುದಿಲ್ಲ. ತಡವಾದರೂ ಸತ್ಯಕ್ಕೆ ಎಂದಿಗೂ ಜಯ. ಸತ್ಯಮೇವ ಜಯತೇ ಎಂದಿದ್ದಾರೆ.

RELATED ARTICLES

Latest News