SC,ST ಸಮುದಾಯದ ಭೂ ಪರಿವರ್ತನೆ ಅಧಿಕಾರ ಜಿಲ್ಲಾಧಿಕಾರಿಗೆ

Social Share

ಬೆಂಗಳೂರು, ನ.6- ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನಿನ ನಾಲ್ಕು ಗುಂಟೆಯಲ್ಲಿ ಸ್ವಂತ ವಾಸದ ಮನೆ ನಿರ್ಮಿಸುವ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಎಸ್ಸಿ ,ಎಸ್ಟಿ ಸಮುದಾಯದವರಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ಇಲವೆ 4 ಗುಂಟೆಯಲ್ಲಿ
ಸ್ವಂತ ವಾಸದ ಮನೆ ನಿರ್ಮಿಸುವ ಉದ್ದೇಶಕ್ಕಾಗಿ ಸಲ್ಲಿಸಿದ ಅರ್ಜಿಯನ್ನು ನಿಯಮಾನುಸಾರ ಪರಿಶೀಲಿಸಿ ಜಿಲ್ಲಾಧಿಕಾರಿಯ ಹಂತದಲ್ಲಿಯೇ ಭೂ ಪರಿವರ್ತನೆ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಆದರೆ, ಸ್ವಂತ ವಾಸದ ಮನೆ ನಿರ್ಮಾಣ ಉದ್ದೇಶಕ್ಕಾಗಿ ಭೂ ಪರಿವರ್ತನೆಯಾದ ಜಮೀನನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡುವಂತ್ತಿಲ್ಲ ಎಂಬ ಷರತ್ತು ವಿಧಿಸಲು ಸೂಚಿಸಿದೆ. ಒಂದು ವೇಳೆ ಜಮೀನು ಮಾರಾಟ ಮಾಡಬೇಕಾದರೆ ಸರ್ಕಾರ ಪೂರ್ವಾನುಮತಿ ಕಡ್ಡಾಯವಾಗಿದೆ.

ಬೆಂಗಳೂರಿಗೆ ಬಂದಿಳಿದ AICC ಅಧ್ಯಕ್ಷ ಖರ್ಗೆ, ಕಾಂಗ್ರೆಸ್‍ನಲ್ಲಿ ಹಬ್ಬದ ವಾತಾವರಣ

ಸರ್ಕಾರದ ಸೂಚನೆ ಪಾಲನೆಯಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಯನ್ನು ಹೊಣೆಗಾರರನ್ನಾಗಿ ಮಾಡುವ ಎಚ್ಚರಿಕೆಯ ಸೂಚನೆ ನೀಡಲಾಗಿದೆ. ಸರ್ಕಾರದಿಂದ ಎಸ್ಸಿ , ಎಸ್ಟಿ ಸಮುದಾಯದವರಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ಇಲವೆ 4 ಗುಂಟೆಯಲ್ಲಿ ಸ್ವಂತ ವಾಸದ ಮನೆ ನಿರ್ಮಿಸುವ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿ ಅಥವಾ ತಹಸಿಲ್ದಾರ್ ಅವರಿಗೆ ಅಧಿಕಾರ ನೀಡಬೇಕು ಎಂದು ರಾಜ್ಯ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರು ಕಂದಾಯ ಸಚಿವರಿಗೆ ಮನವಿ ಮಾಡಿದ್ದರು. ಈ ಮನವಿ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಮೇಲಿನಂತೆ ಸುತ್ತೋಲೆ ಹೊರಡಿಸಿದೆ.

ಸಿಡ್ನಿಯಲ್ಲಿ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಬಂಧನ

ಸರ್ಕಾರದಿಂದ ಎಸ್ಸಿ ,ಎಸ್ಟಿ ಸಮುದಾಯದವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೆ, ಪರಭಾರೆ ಮಾಡಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ 1978ರ ಪ್ರಕಾರ ನಿರ್ಬಂಧ ವಿಧಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದವರು ಜಮೀನು ರಹಿತರಾಗುವುದನ್ನು ತಪ್ಪಿಸಲು ಈ ಕಾಯ್ದೆ ಜಾರಿಗೆ ತರಲಾಗಿದೆ.

Articles You Might Like

Share This Article