ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ

Social Share

ಬೆಂಗಳೂರು,ಜು.21- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಲ್ಲಿ ಅಪೌಷ್ಟಿಕ ಪ್ರಮಾಣ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ ವಿತರಿಸಲು ಸರಕಾರ ನಿರ್ಧರಿಸಿದೆ.

ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ಎಲ್ಲಾ ಜಿಲ್ಲೆಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 46 ದಿನಗಳ ಕಾಲ ವಿತರಿಸಲಾಗುತ್ತದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಲ್ಯಾಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಫ್ಲೆಕ್ಸಿ ಅನುದಾನದಡಿ ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು 46 ದಿನಗಳ ಕಾಲ ಅನುಷ್ಠಾನಗೊಳಿಸಲಾಗಿತ್ತು.

ಈ ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ 100 ದಿನಗಳ ಕಾಲ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ವಿಶಾಲ್ ಆರ್. ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಸರ್ಕಾರ 46 ದಿನಗಳಿಗೆ ಮಾತ್ರ ಅನುಮೋದನೆ ನೀಡಿದೆ.

ಈ ನಡುವೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದು, ಯಾವುದೇ ವಿದ್ಯಾರ್ಥಿ ಬಲವಂತವಾಗಿ ಮೊಟ್ಟೆ ಸೇವಿಸುವಂತೆ ಒತ್ತಾಯಿಸುವುದಿಲ್ಲ, ಸಸ್ಯಾಹಾರಿಗಳು ಚಿಕ್ಕಿ ಮತ್ತು ಬಾಳೆಹಣ್ಣು ಆಯ್ಕೆ ಮಾಡಿಕೊಳ್ಳಬಹುದು ಎಂದು ಸ್ಪಷ್ಟನೆ ನೀಡಿದ್ದಾರೆ.

Articles You Might Like

Share This Article