Sunday, April 28, 2024
Homeರಾಜ್ಯವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ

ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ

ಬೆಂಗಳೂರು,ಡಿ.22- ಕೋಲಾರದ ಮಾಲೂರು ತಾಲೂಕಿನ ಯಲುವಳ್ಳಿಯಲ್ಲಿನ ಅಹಿತಕರ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣ ವರದಿಯಾಗಿದೆ. ನಗರದ ಆಂದ್ರಹಳ್ಳಿಯಲ್ಲಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ಲೌಸ್ ಹಾಗೂ ಇತರ ಯಾವುದೇ ಸುರಕ್ಷತಾ ಸಲಕರಣೆಗಳಿಲ್ಲದೆ ವಿದ್ಯಾರ್ಥಿಗಳು ಆಸಿಡ್‍ನಂತಹ ರಾಸಾಯನಿಕಗಳನ್ನು ಬಳಸಿ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಾರ್ವಜನಿಕರು ಇದನ್ನು ಗಮನಿಸಿ ಮೊಬೈಲ್‍ನಲ್ಲಿ ಚಿತ್ರಿಸಿದ್ದಾರೆ. ನಂತರ ಗ್ರಾಮದ ಹಿರಿಯರು ಶಾಲೆಗೆ ಭೇಟಿ ನೀಡಿ, ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೋಷಕರು ಪ್ರತಿಭಟನೆ ನಡೆಸಿ, ಶಿಕ್ಷಕರ ಕ್ರಮವನ್ನು ಖಂಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮಕ್ಕಳನ್ನು ಇಂತಹ ಕಾರ್ಯಗಳಿಗೆ ತೊಡಗಿಸಿಕೊಳ್ಳಲು ಅವಕಾಶವಾಗದಂತೆ ಸುತ್ತೋಲೆ ರವಾನಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಸಲಹೆ ನೀಡಲಾಗುವುದು. ಶಿಕ್ಷಕರು ಯಾವ ರೀತಿಯ ತಪ್ಪು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ, ಅಗತ್ಯವಾದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಭಾವನೆ ಇಲ್ಲ : ಮೋದಿ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಹಾಗೂ ಇತರ ವ್ಯವಸ್ಥೆಗಳ ಮೇಲೆ ನಿಗಾ ವಹಿಸಲು ವಿಚಕ್ಷಣಾ ದಳವನ್ನು ರಚಿಸಲಾಗುವುದು. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳಲ್ಲಿ ಯಾರನ್ನೂ ಕ್ಷಮಿಸುವುದಿಲ್ಲ ಎಂದು ಹೇಳಿದರು.

RELATED ARTICLES

Latest News