ವಾರದ ಬಳಿಕ ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳು ಆರಂಭ

Social Share

ಶಿವಮೊಗ್ಗ,ಫೆ.28- ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಒಂದು ವಾರದಿಂದ ರಜೆ ಘೋಷಣೆಯಾಗಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಿವೆ.
ಹರ್ಷ ಕೊಲೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿ ಎರಡು ದಿನಗಳ ಕಾಲ ಕಫ್ರ್ಯೂ , ನಿಷೇಧಾಜ್ಞೆ ಜಾರಿಗೊಳಿಸಿ ಶಾಲಾ- ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.
ನಗರ ಇದೀಗ ಸಹಜ ಸ್ಥಿತಿಗೆ ಬಂದಿದ್ದು, ಒಂದು ವಾರದ ಬಳಿಕ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಆದರೆ, ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ ಎಂದು ಜಿಲ್ಲಾಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.
ಬೆಳಗ್ಗೆ 6ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ತುರ್ತು ಸೇವೆಗೆ ಮಾತ್ರ ಅನುಮತಿ ನೀಡಲಾಗಿದೆ.
ಕಳೆದ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಯಾಗಿತ್ತು. ಪಾರ್ಥೀವಶರೀರದ ಬೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಉದ್ರಿಕ್ತರು ಅಂಗಡಿ-ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಹಲವು ವಾಹನಗಳು ಜಖಂಗೊಂಡಿದ್ದವು. ಹಲವರು ಗಾಯಗೊಂಡಿದ್ದರು.

Articles You Might Like

Share This Article